ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ Seasonal Flu ಹೆಚ್ಚಳದ ಭೀತಿ ಉಂಟಾಗಿದ್ದು, ಈ ಹಿನ್ನೆಲೆ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಇದರ ಪರಿಣಾಮವಾಗಿ ಸದ್ಯ Seasonal Flu ಭೀತಿ ಹೆಚ್ಚಾಗಿದೆ. ಡಿಸೆಂಬರ್ನಿಂದ ಜನವರಿ ಹಾಗೂ ಮಾರ್ಚ್ ತನಕ ಸೀಸನಲ್ ಫ್ಲೂ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ವಿಶೇಷ ಎಚ್ಚರಿಕೆ
ಸೀಸನಲ್ ಫ್ಲೂ ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಗರ್ಭಿಣಿಯರಿಗೆ ಹಾಗೂ ಕೋಮಾರ್ಬಿಟೀಸ್ (ಇತರೆ ದೀರ್ಘಕಾಲೀನ ಕಾಯಿಲೆ ಹೊಂದಿರುವ) ರೋಗಿಗಳಿಗೆ ಹೆಚ್ಚು ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ, ಈ ವರ್ಗದವರು ವಿಶೇಷ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಸಂಬಂಧ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇದನ್ನು ಓದಿ : ತುಮಕೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸೀಸನಲ್ ಫ್ಲೂ ಲಕ್ಷಣಗಳು
ಸೀಸನಲ್ ಫ್ಲೂನ ಪ್ರಮುಖ ಲಕ್ಷಣಗಳಲ್ಲಿ ಜ್ವರ, ಕೆಮ್ಮು, ಶೀತ, ಒಣ ಕೆಮ್ಮು, ಮೈಕೈ ನೋವು, ಹಸಿವು ಕಡಿಮೆಯಾಗುವುದು, ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳುವುದು ಸೇರಿವೆ. ಸಾಮಾನ್ಯವಾಗಿ ಈ ಫ್ಲೂ ಒಂದು ವಾರದಿಂದ ಮೂರು ವಾರಗಳವರೆಗೆ ಇರಬಹುದಾದ್ದರಿಂದ, ಆರಂಭಿಕ ಹಂತದಲ್ಲೇ ಚಿಕಿತ್ಸೆ ಪಡೆಯುವುದು ಅತ್ಯಂತ ಅಗತ್ಯವಾಗಿದೆ.
ಆರೋಗ್ಯ ಇಲಾಖೆಯ ಮಾರ್ಗಸೂಚಿಗಳು
ಆರೋಗ್ಯ ಇಲಾಖೆ ತನ್ನ ಮಾರ್ಗಸೂಚಿಯಲ್ಲಿ ಹಲವು ಪ್ರಮುಖ ಸೂಚನೆಗಳನ್ನು ನೀಡಿದ್ದು,
- ಪ್ರತಿ ದಿನ ಕನಿಷ್ಠ 5 ಐಎಲ್ಐ (ILI) ಪ್ರಕರಣಗಳು ಹಾಗೂ 100 ಸಾರಿ (SARI) ಪ್ರಕರಣಗಳ ಪರೀಕ್ಷೆ ನಡೆಸುವಂತೆ ಸೂಚನೆ
- ಎಲ್ಲಾ ಪ್ರಯೋಗಾಲಯಗಳಲ್ಲಿ ಅಗತ್ಯ ಟೆಸ್ಟಿಂಗ್ ಕಿಟ್ಗಳ ಲಭ್ಯತೆ ಖಚಿತಪಡಿಸಿಕೊಳ್ಳುವುದು
- ಪಿಪಿಇ ಕಿಟ್ಗಳು, ಎನ್95 ಮಾಸ್ಕ್ಗಳು, ಆಸೆಲ್ಟಾಮಿವಿರ್ (Oseltamivir) ಮಾತ್ರೆಗಳು ಸೇರಿದಂತೆ ಅಗತ್ಯ ಔಷಧಗಳ ಶೇಖರಣೆ
- ಇನ್ಫ್ಲೂಯೆನ್ಸ್ ಲಸಿಕೆ ಸಂಗ್ರಹ ಮತ್ತು ವಿತರಣೆ
- ಹೆಲ್ತ್ ಕೇರ್ ವರ್ಕರ್ಸ್, ಗರ್ಭಿಣಿಯರು ಹಾಗೂ ಹೆಚ್ಚಿನ ಅಪಾಯದಲ್ಲಿರುವ ರೋಗಿಗಳು ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಸಲಹೆ
- ಕ್ಲಿನಿಕಲ್ ಮ್ಯಾನೇಜ್ಮೆಂಟ್ ಹಾಗೂ ಕ್ರಿಟಿಕಲ್ ಕೇರ್ ಸಿದ್ಧತೆ
- ವೆಂಟಿಲೇಟರ್ಗಳ ಸಿದ್ಧತೆಗೆ ವಿಶೇಷ ಗಮನ
ಅದೇ ರೀತಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸಮಯಕ್ಕೆ ಸರಿಯಾಗಿ ಪ್ರಕರಣಗಳ ಮಾನಿಟರಿಂಗ್ ಮಾಡುವಂತೆ ಆರೋಗ್ಯ ಇಲಾಖೆ ಕರೆ ನೀಡಿದೆ. ಸೀಸನಲ್ ಫ್ಲೂನಿಂದ ರಕ್ಷಣೆ ಪಡೆಯಲು ಸ್ವಚ್ಛತೆ ಪಾಲನೆ, ಮಾಸ್ಕ್ ಬಳಕೆ, ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯವೆಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನು ನೋಡಿ : ಸಹಾಯ ಪಡೆದವಳನ್ನ ಮಂಚಕ್ಕೆ ಕರೆದ ಆನ್ಲೈನ್ ಗೆಳೆಯ – ಮಹಿಳೆ ಆತ್ಮಹತ್ಯೆಗೆ ಯತ್ನ




