Tumakuru : ಊರುಕೆರೆಯಲ್ಲಿ ಆಹಾರ ಅದಾಲತ್ ಕಾರ್ಯಕ್ರಮ.

Tumakuru ತಾಲ್ಲೂಕಿನ ಊರುಕೆರೆ ಗ್ರಾಮದಲ್ಲಿ ನೆನ್ನೆ ಜಿಲ್ಲಾಡಳಿತ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಹಾರ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬಡತನ ರೇಖೆಗಿಂತ ಕೆಳಗಿರುವ ಅರ್ಹ 10 ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಹೊಸ ಪಡಿತರ ಚೀಟಿಗಳನ್ನು ವಿತರಿಸಲಾಯಿತು.

ಹೊಸ ಪಡಿತರ ಚೀಟಿ ವಿತರಣೆ
ಕಾರ್ಯಕ್ರಮದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸೌಮ್ಯ ಅವರು ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸಿದರು.
ಪಡಿತರ ಚೀಟಿದಾರರು ತಮ್ಮ ಸಮಸ್ಯೆಗಳಿಗಾಗಿ ಜಿಲ್ಲಾ ಕೇಂದ್ರಕ್ಕೆ ಬರುವ ಅವಶ್ಯಕತೆ ತಪ್ಪಿಸಲು ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಸದುಪಯೋಗ ಪಡೆಯಬೇಕೆಂದು ಸಲಹೆ
ತುಮಕೂರು ತಾಲ್ಲೂಕು ತಹಶೀಲ್ದಾರ್ ರಾಜೇಶ್ವರಿ ಅವರು ಮಾತನಾಡಿ, ವಯೋವೃದ್ಧರು ಹಾಗೂ ಹಾಸಿಗೆ ಹಿಡಿದಿರುವ ಪಡಿತರ ಚೀಟಿದಾರರಿಗೆ ಬಯೋಮೆಟ್ರಿಕ್ ಪ್ರಕ್ರಿಯೆಯಿಂದ ವಿನಾಯಿತಿ ನೀಡಬಹುದಾಗಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಸಲಹೆ ನೀಡಿದರು.
ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅರ್ಜಿದಾರರಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವಂತೆ ಹಾಗೂ ಸ್ವೀಕರಿಸಿದ ಎಲ್ಲಾ ಅರ್ಜಿಗಳನ್ನು ತುರ್ತಾಗಿ ಪರಿಶೀಲಿಸಿ ವಿಲೇವಾರಿ ಮಾಡುವಂತೆ ಆಹಾರ ನಿರೀಕ್ಷಕರಿಗೆ ಸೂಚಿಸಿದರು.
ಇದನ್ನು ಓದಿ : ಸೀಸನಲ್ ಫ್ಲೂ ಆತಂಕ – ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ!

10 ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿ ವಿತರಣೆ – Tumakuru
ಕಾರ್ಯಕ್ರಮದಲ್ಲಿ ಊರುಕೆರೆ ಗ್ರಾಮದ ಕರಿಯಮ್ಮ, ಭಾಗ್ಯ, ಸುರೇಖಾ, ಗೀತಾ, ಮಹಾದೇವಮ್ಮ, ಮಂಜಮ್ಮ, ಎನ್.ಎಸ್. ಗೀತಾ, ಲಕ್ಷ್ಮಿ ಎ., ತಾರಾ ಎಚ್.ಎಲ್. ಹಾಗೂ ಶಿಲ್ಪ ಎಂಬುವವರಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಆಹಾರ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, VSSSN ಊರುಕೆರೆ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಊರುಕೆರೆ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು, ನ್ಯಾಯಬೆಲೆ ಅಂಗಡಿಗಳ ಮಾಲೀಕರು ಹಾಗೂ ಕಾರ್ಯದರ್ಶಿಗಳು ಹಾಜರಿದ್ದರು.

ಇದನ್ನು ನೋಡಿ : ಥೂ ಇವಳೆಂಥಾ ನೀಚ ಹೆಂಡ್ತಿ ಇರ್ಬೇಕು – ಆಸ್ತಿ ಬರೆಸಿಕೊಂಡು ಹೊರಗೆ ಹಾಕಿದ್ಳು




