Chikkanayakanahalli ಯಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ: ರೂಪಾಂತರ ಸಂಸ್ಥೆಯ ಮಹಿಳಾ ಕನ್ನಡ ರಾಜ್ಯೋತ್ಸವ.

ರೂಪಾಂತರ ಮಹಿಳಾ ಸಶಕ್ತಿಕರಣ ಮತ್ತು ಸಮುದಾಯ ಅಭಿವೃದ್ಧಿ ಸಂಸ್ಥೆ ಮೊದಲನೇ ವರ್ಷದ ಮಹಿಳಾ ಕನ್ನಡ ರಾಜ್ಯೋತ್ಸವವನ್ನು ಡಿಸೆಂಬರ್ 23 ರಂದು ಬೆಳಗ್ಗೆ 10.30ಕ್ಕೆ Chikkanayakanahalli ಪಟ್ಟಣದ ತೀ.ನಂ.ಶ್ರೀ. ಸಭಾಂಗಣದಲ್ಲಿ ಆಯೋಜಿಸಿದೆ.
ನಾಗಲಕ್ಷ್ಮೀ ಚೌಧರಿ ಕಾರ್ಯಕ್ರಮ ಉದ್ಘಾಟನೆ
ಇನ್ನು ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ರೂಪಶ್ರೀ ಟಿ. ಮಾಹಿತಿ ನೀಡಿದ್ದು, ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಉದ್ಘಾಟಿಸಲಿದ್ದಾರೆ ಮತ್ತು ಸಂಸದ ಬಿ.ಬಿ. ಸುರೇಶ್ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನು ಓದಿ : ‘ಟಾಕ್ಸಿಕ್’ ಸಿನಿಮಾ ನಾಯಕಿಯ ಫಸ್ಟ್ ಲುಕ್ ರಿಲೀಸ್
ವಿಶೇಷ ಆಹ್ವಾನಿತ
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ., ಪೋಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಉಪಸ್ಥಿತರಿದ್ದು, ತಾಲ್ಲೂಕು ದಂಡಾಧಿಕಾರಿ ಮಮತಾ ಕೆ.ಪಿ, ಉಪಾಧ್ಯಕ್ಷ ಮುರಳೀಧರ ಹಾಲಪ್ಪ, ಆರಕ್ಷಕ ವೃತ್ತ ನಿರೀಕ್ಷಕ ಪಿ.ಆರ್. ಜನಾರ್ಧನ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಲ್. ಯೋಗೇಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್. ರವಿಕುಮಾರ್ ಮುಂತಾದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಕನ್ನಡ ರಾಜ್ಯೋತ್ಸವ ಗೌರವ ಪ್ರಶಸ್ತಿ ಪ್ರದಾನ
ಇನ್ನು ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಮಹಿಳಾ ಕನ್ನಡ ರಾಜ್ಯೋತ್ಸವ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಇದೇ ವೇಳೆ, ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವೂ ಆಯೋಜನೆಯಾಗಿದೆ. ಶಿಬಿರವನ್ನು ಕುಮಾರ್ ಹಾಸ್ಪಿಟಲ್ ಹಾಗೂ ಶೇಖರ್ ಬ್ಲಡ್ ಸೆಂಟರ್ ವೈದ್ಯರ ಸಹಕಾರದಲ್ಲಿ ನಡೆಯಲಿದೆ.
ಇನ್ನು ಈ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷೆ ಶಕುಂತಲಾ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಇದನ್ನು ನೋಡಿ : ರೋಡ್ನಲ್ಲೇ 2 ಗ್ಯಾಂಗ್ ಮಧ್ಯೆ ಗಲಾಟೆ- ದೊಣ್ಣೆಯಿಂದ ಹೊಡೆದು ರಕ್ತ ಸುರಿಸಿದ್ರು




