ಈಜಲು ತೆರಳಿದ್ದ PUC ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವು.

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ : Haveri|ಹಾಸ್ಟೆಲ್ ಊಟ ಸೇವಿಸಿದ 14 ವಿದ್ಯಾರ್ಥಿನಿಯರು ಅಸ್ವಸ್ಥ..!
PUC ವಿದ್ಯಾರ್ಥಿ ಸಾವು
ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ನಗರದ ಕಾಮಕ್ಷಿ ಬೀದಿಯ ನಿವಾಸಿ ಪ್ರೇಮ್ ಕುಮಾರ್ (17) ಎಂದು ಗುರುತಿಸಲಾಗಿದೆ. ಪ್ರೇಮ್ ಕುಮಾರ್ DVS ಕಾಲೇಜಿನಲ್ಲಿ PUC ವ್ಯಾಸಂಗ ಮಾಡುತ್ತಿದ್ದರು. ಸ್ನೇಹಿತರೊಂದಿಗೆ ದೇವಾಲಯಕ್ಕೆ ತೆರಳಿದ್ದ ವೇಳೆ, ನದಿಯಲ್ಲಿ ಈಜಲು ಇಳಿದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈಜುವ ಸಂದರ್ಭದಲ್ಲಿ ಅಚಾನಕ್ ನೀರಿನಲ್ಲಿ ಮುಳುಗಿದ ಪರಿಣಾಮ ಪ್ರೇಮ್ ಕುಮಾರ್ ಸಾವನ್ನಪ್ಪಿದ್ದಾನೆ.
ಮರಣೋತ್ತರ ಮೆಗ್ಗಾನ್ ಆಸ್ಪತ್ರೆಗೆ ರವಾನೆ
ಇನ್ನು ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನು ನೋಡಿ : ಯೂಸ್ ಆಗ್ತಿಲ್ಲ ಉಪ್ಪಾರಹಳ್ಳಿ ಶೌಚಾಲಯ ವರ್ಷಗಳೇ ಕಳೆದ್ರು ಉದ್ಘಾಟನೆ ಭಾಗ್ಯವಿಲ್ಲ




