Doddaballapur : ಅನೈತಿಕ ಸಂಬಂಧವನ್ನು ಕೊನೆಗೊಳಿಸಿದ್ದಕ್ಕೆ ಯುವಕನ ಮೇಲೆ ಮಹಿಳೆಯೊಬ್ಬಳು ಗ್ಯಾಂಗ್ ಕಟ್ಟಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ.

Doddaballapur : ಅನೈತಿಕ ಸಂಬಂಧವನ್ನು ಕೊನೆಗೊಳಿಸಿದ್ದಕ್ಕೆ ಯುವಕನ ಮೇಲೆ ಮಹಿಳೆಯೊಬ್ಬಳು ಗ್ಯಾಂಗ್ ಕಟ್ಟಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ಮಧ್ಯಪ್ರವೇಶದಿಂದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪೊಲೀಸರು ಮಹಿಳೆ ಸೇರಿ ಇಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಸಂಬಂಧ ಮುರಿದಿದ್ದಕ್ಕೆ ಪ್ರತೀಕಾರ
ಕಾರ್ತಿಕ್ ಎಂಬ ಯುವಕ ದೀಪಾ ಎಂಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು. ಮನೆಯವರ ಬುದ್ಧಿವಾದದ ಬಳಿಕ ಆಕೆಯೊಂದಿಗೆ ಸಹವಾಸವನ್ನು ಸಂಪೂರ್ಣವಾಗಿ ತೊರೆಯಲು ಕಾರ್ತಿಕ್ ನಿರ್ಧರಿಸಿದ್ದ. ಇದರಿಂದ ಆಕ್ರೋಶಗೊಂಡ ದೀಪಾ, ಕಾರ್ತಿಕ್ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಿದ್ದಾಳೆ.
ಇದನ್ನು ಓದಿ : ಅಭಿಮಾನಿಗಳ ವರ್ತನೆಗೆ ನಟಿ ಸಮಂತಾ ಕಸಿವಿಸಿ
ಡಿಸೆಂಬರ್ 13ರ ಸಂಜೆ, ಕಾರ್ತಿಕ್ ಅಂಗಡಿಯೊಂದರ ಬಳಿ ಇದ್ದಾಗ ದೀಪಾ ಕಾರಿನಲ್ಲಿ ಗ್ಯಾಂಗ್ ಜೊತೆ ಆಗಮಿಸಿದ್ದಾಳೆ. ಆಕೆಯ ಸಹಚರರು ಲಾಂಗ್ ಹಾಗೂ ಮಚ್ಚುಗಳಿಂದ ಕಾರ್ತಿಕ್ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ದೀಪಾ ಕಾರಿನಲ್ಲೇ ಕುಳಿತಿದ್ದಳು ಎನ್ನಲಾಗಿದೆ.
ದಾಳಿ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಗ್ಯಾಂಗ್ ವಿರುದ್ಧ ತಿರುಗಿಬಿದ್ದಿದ್ದಾರೆ. ಇದರಿಂದ ಗಾಬರಿಗೊಂಡ ದೀಪಾ ಮತ್ತು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸಾರ್ವಜನಿಕರ ಸಮಯೋಚಿತ ಮಧ್ಯಪ್ರವೇಶದಿಂದ ಕಾರ್ತಿಕ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮಹಿಳೆ ಸೇರಿ ಇಬ್ಬರ ಬಂಧನ
ಘಟನೆಯ ಕುರಿತು ದೂರು ದಾಖಲಾಗುತ್ತಿದ್ದಂತೆ ದೊಡ್ಡಬೆಳವಂಗಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹಲ್ಲೆಗೆ ಸಂಚು ರೂಪಿಸಿದ್ದ ದೀಪಾ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳ ಪಾತ್ರವಿದೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : ತೋಟಕ್ಕೆ ಹೋದ ಮಹಿಳೆಯನ್ನು ಚಿರತೆ ಕೊಂದ ಘಟನೆ SHOCKING | TURUVEKERE NEWS




