Mysuru : ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ಬಳಸಿ ₹80,000 ಹಣವನ್ನು ದೋಚಿದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Mysuru : ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ಬಳಸಿ ₹80,000 ಹಣವನ್ನು ದೋಚಿದ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾನವೀಯತೆ ತೋರಿಸಬೇಕಿದ್ದ ಸಂದರ್ಭದಲ್ಲೇ ವಂಚನೆ ನಡೆಸಿದ ಈ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ. ಇವರು ಮೈಸೂರು ಮಹದೇವಪುರ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಡಿ.19 ರಂದು ಮೈಸೂರು ತಾಲೂಕಿನ ಕಡಕೊಳದ ಬಳಿ ಗಣೇಶ್ ಎಂಬವರು ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಮರಳುವ ವೇಳೆ ಅಪಘಾತಕ್ಕೆ ಒಳಗಾಗಿದ್ದರು. ಆ ವೇಳೆ ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಸ್ಥಳಕ್ಕೆ ಬಂದ ರಮೇಶ್ ಮತ್ತು ಮನು, ಗಣೇಶ್ ಅವರ ಮೊಬೈಲ್ನ್ನು ಪಡೆದುಕೊಂಡಿದ್ದಾರೆ.
ಇದನ್ನು ಓದಿ : Dina Bhavishya|ದಿನ ಭವಿಷ್ಯ 23 ಡಿಸೆಂಬರ್ 2025
UPI ಮೂಲಕ ಹಣ ವರ್ಗಾವಣೆ
ಆರೋಪಿಗಳು ಗಣೇಶ್ ಮೊಬೈಲ್ನಲ್ಲಿದ್ದ ಯುಪಿಐ (UPI) ಬಳಸಿ ₹80,000 ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು, ಅವರನ್ನು ಆಸ್ಪತ್ರೆಗೆ ಸೇರಿಸದೇ ಪರಾರಿಯಾಗಿದ್ದರು. ನಂತರ ಈ ವಿಷಯ ತಿಳಿದ ಗಣೇಶ್ ಸಹೋದರ ಅಂಕನಾಯಕ ಸ್ಥಳಕ್ಕೆ ಆಗಮಿಸಿ, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಹಣ ವರ್ಗಾವಣೆ ಸಂಬಂಧಿತ ಮಾಹಿತಿಯನ್ನು ಸಂಗ್ರಹಿಸಿದ ಮೈಸೂರು ಪೊಲೀಸರು ತ್ವರಿತ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹80,000 ನಗದು ಹಾಗೂ ಎರಡು ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ಅಪಘಾತ ಸಂದರ್ಭಗಳಲ್ಲಿ ಸಹಾಯ ಮಾಡುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಸಲಹೆ ನೀಡಿದ್ದಾರೆ. ಯಾವುದೇ ಅನುಮಾನಾಸ್ಪದ ಘಟನೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ಇದನ್ನು ನೋಡಿ : ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ




