Chikkanayakanahalli ಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ.

Chikkanayakanahlli ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಡಿ ಕಲ್ಲನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿದ್ದು, ಗ್ರಾಮಸ್ಥರು ದಿನನಿತ್ಯ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಖಾಸಗಿ ಬೋರಿಗೆ ಅವಲಂಬಿಸಿದ ಗ್ರಾಮಸ್ಥರು
ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಸಮರ್ಪಕವಾಗಿ ಲಭ್ಯವಿಲ್ಲದೆ ಸಾರ್ವಜನಿಕರು ಖಾಸಗಿ ಬೋರ್ವೆಲ್ಗಳ ನೀರಿನ ಮೇಲೆಯೇ ಅವಲಂಬಿತರಾಗಿದ್ದಾರೆ. ಸರ್ಕಾರಿ ಕುಡಿಯುವ ನೀರಿನ ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಹಲವು ಬೋರ್ವೆಲ್ಗಳು ಒಣಗುತ್ತಿದ್ದು, ಕೆಲವೆಡೆ ಪೈಪ್ಲೈನ್ಗಳು ಹಾನಿಗೊಳಗಾಗಿರುವುದಾದರೂ ಗ್ರಾಮ ಪಂಚಾಯಿತಿ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : ನಾಲಿಗೆ ಹರಿಬಿಟ್ಟರೆ ಬೀಳುತ್ತೆ ಕೇಸ್.! ಎಚ್ಚರಿಕೆ ನೀಡಿದ ಗುಬ್ಬಿ ಶ್ರೀನಿವಾಸ್
ದೈನಂದಿನ ಜೀವನ ಅಸ್ತವ್ಯಸ್ತ
ಇನ್ನು ನೀರಿನ ಕೊರತೆಯಿಂದಾಗಿ ಮಹಿಳೆಯರು ಹಾಗೂ ಮಕ್ಕಳು ದೂರದ ಪ್ರದೇಶಗಳಿಗೆ ತೆರಳಿ ನೀರು ತರಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇದರಿಂದ ಅವರ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಶಿಕ್ಷಣ ಮತ್ತು ಗೃಹ ಕಾರ್ಯಗಳ ಮೇಲೂ ಪರಿಣಾಮ ಬೀರುತ್ತಿದೆ.
ಗ್ರಾಮಸ್ಥರಲ್ಲಿ ಆತಂಕ – Chikkanayakanahalli
ಬೇಸಿಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆ ನೀರಿನ ಸಮಸ್ಯೆ ಇನ್ನಷ್ಟು ಗಂಭೀರವಾಗುವ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ತಕ್ಷಣವೇ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಶಾಶ್ವತ ಕುಡಿಯುವ ನೀರಿನ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಇನ್ನು ನೀರಿನ ಸಮಸ್ಯೆಗೆ ಶೀಘ್ರ ಸ್ಪಂದನೆ ದೊರಕದಿದ್ದಲ್ಲಿ ಹೋರಾಟಕ್ಕೆ ಮುಂದಾಗುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಇದನ್ನು ನೋಡಿ : ತುಮಕೂರಿನಲ್ಲಿ ಹೆಚ್ಚಾಗ್ತಿದ್ದಾರೆ FAKE DOCTROS – ಆರೋಗ್ಯ ಇಲಾಖೆ ಏನ್ ಮಾಡ್ತಾ ಇದೆ?




