ಕನ್ನಡಿಗ Krishnappa Gowtham ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ.

ಕರ್ನಾಟಕ ತಂಡದ ಹಿರಿಯ ಆಲ್ರೌಂಡರ್ ಕೃಷ್ಣಪ್ಪ ಗೌತಮ್ (Krishnappa Gowtham) ಅವರು ನೆನ್ನೆ ಎಲ್ಲಾ ಸ್ವರೂಪದ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ತಮ್ಮ 14 ವರ್ಷಗಳ ದೀರ್ಘ ಕ್ರಿಕೆಟ್ ವೃತ್ತಿ ಬದುಕಿಗೆ ಪೂರ್ಣ ವಿರಾಮ ಇಟ್ಟಿದ್ದಾರೆ. ಈ ಮಹತ್ವದ ನಿರ್ಧಾರವನ್ನು ಅವರು ತಮ್ಮ Instagram ಖಾತೆಯ ಮೂಲಕ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಆಫ್ ಸ್ಪಿನ್ ಬೌಲಿಂಗ್ ಹಾಗೂ ಕೆಳ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಹೆಸರು ಮಾಡಿದ್ದ ಗೌತಮ್, ಭಾರತ ಎ (India A), ಇಂಡಿಯನ್ ಪ್ರೀಮಿಯರ್ ಲೀಗ್ (IPL) ಹಾಗೂ ರಣಜಿ ಟ್ರೋಫಿ ಸೇರಿದಂತೆ ದೇಶಿ ಕ್ರಿಕೆಟ್ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ರಣಜಿ ಟ್ರೋಫಿಯಲ್ಲಿ ಗಮನಾರ್ಹ ಆರಂಭ
2012ರಲ್ಲಿ ಉತ್ತರ ಪ್ರದೇಶ ವಿರುದ್ಧ ಕರ್ನಾಟಕ ತಂಡದ ಪರ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ ಗೌತಮ್, ತಮ್ಮ ಮೊದಲ ಪಂದ್ಯದಲ್ಲಿಯೇ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಸುರೇಶ್ ರೈನಾ ಹಾಗೂ ಭುವನೇಶ್ವರ್ ಕುಮಾರ್ ಅವರನ್ನು ಔಟ್ ಮಾಡುವ ಮೂಲಕ ಕ್ರಿಕೆಟ್ ವಲಯದ ಗಮನ ಸೆಳೆದಿದ್ದರು. ಸ್ಪಿನ್ ಬೌಲಿಂಗ್ ಜೊತೆಗೆ ಕೆಳ ಕ್ರಮಾಂಕದ ಸ್ಪೋಟಕ ಬ್ಯಾಟಿಂಗ್ ಮೂಲಕ ಅವರು ಕರ್ನಾಟಕ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡರು.
ಇದನ್ನು ಓದಿ : ಕುಡಿಯುವ ನೀರಿಗಾಗಿ ಪರದಾಟ – ಖಾಸಗಿ ಬೋರ್ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಉತ್ತಮ ಪ್ರದರ್ಶನ
2016-17ರ ರಣಜಿ ಟ್ರೋಫಿ ಋತುವಿನಲ್ಲಿ ಗೌತಮ್ ಶ್ರೇಷ್ಠ ಪ್ರದರ್ಶನ ನೀಡಿದ್ದು, ಕೇವಲ 8 ಪಂದ್ಯಗಳಿಂದ 27 ವಿಕೆಟ್ಗಳನ್ನು ಕಬಳಿಸಿದ್ದರು. ಇದೇ ಋತುವಿನಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಸ್ಸಾಂ ವಿರುದ್ಧ ನಡೆದ ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸುವ ಮೂಲಕ ತಮ್ಮ ಆಲ್ರೌಂಡರ್ ಸಾಮರ್ಥ್ಯವನ್ನು ಅನಾವರಣಗೊಳಿಸಿದ್ದರು. ಈ ಪ್ರದರ್ಶನದಿಂದ ಅವರು ಆಲ್ರೌಂಡರ್ ಆಗಿ ತಮ್ಮದೇ ಗುರುತು ಮೂಡಿಸಿದರು.

IPL ನಲ್ಲಿ ಬಹು ತಂಡಗಳ ಪರ ಸೇವೆ
ಐಪಿಎಲ್ ಟೂರ್ನಿಯಲ್ಲಿ Krishnappa Gowtham ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಖನೌ ಸೂಪರ್ ಜಯಂಟ್ಸ್ ಸೇರಿದಂತೆ ಹಲವು ತಂಡಗಳನ್ನು ಪ್ರತಿನಿಧಿಸಿದ್ದಾರೆ.
2021ರ IPL ಮಿನಿ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅವರನ್ನು 9.25 ಕೋಟಿ ರೂಪಾಯಿಗೆ ಖರೀದಿಸಿತ್ತು. ಒಟ್ಟಾರೆ ತಮ್ಮ ಐಪಿಎಲ್ ವೃತ್ತಿಯಲ್ಲಿ 35 ಕೋಟಿ ರೂಪಾಯಿಗಿಂತ ಹೆಚ್ಚು ಮೊತ್ತವನ್ನು ಅವರು ಗಳಿಸಿದ್ದಾರೆ.

ಇದನ್ನು ನೋಡಿ : ಅನೈತಿಕ ಸಂಬಂಧಕ್ಕೆ ಕರೆ, ಬರದಿದ್ದುದಕ್ಕೆ ಯುವಕನಿಗೆ ಮಚ್ಚಿನ ಅಟ್ಯಾಕ್!




