ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎರಡು ತಿಂಗಳ ಗರ್ಭಿಣಿ ನೇಣು ಬಿಗಿದುಕೊಂಡು Suicide.

ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಎರಡು ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು Suicide ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಪುಷ್ಪ (25) ಎಂದು ಗುರುತಿಸಲಾಗಿದೆ.
ಗರ್ಭಿಣಿ ಸಾವು
ಪುಷ್ಪ ಮತ್ತು ಗಂಡ ಹರೀಶ್ ಇಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವ ವೇಳೆ ಪರಸ್ಪರ ಪ್ರೀತಿಸಿ ನಂತರ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದರು. ಕಳೆದ ಎರಡು ವರ್ಷಗಳಿಂದ ದಾಂಪತ್ಯ ಜೀವನ ನಡೆಸುತ್ತಿದ್ದ ಈ ದಂಪತಿಗೆ ಒಂದೂವರೆ ವರ್ಷದ ಗಂಡು ಮಗು ಇದೆ.
ಇದನ್ನು ಓದಿ : ಹಾಸನದಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ
ಕೌಟಂಬಿಕ ಕಲಹ
ಆದರೆ ಅನ್ಯಜಾತಿ ಎಂಬ ಕಾರಣಕ್ಕೆ ಪುಷ್ಪ ಪೋಷಕರನ್ನು ಹರೀಶ್ ಮನೆಗೆ ಬಿಟ್ಟುಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ. ಅಲ್ಲದೆ ಈ ಮಧ್ಯೆ ಸಣ್ಣಪುಟ್ಟ ವಿಚಾರಕ್ಕೆ ಪದೇ ಪದೇ ಕೌಟಂಬಿಕ ಕಲಹ ಶುರುವಾಗಿದ್ದು, ವಿಚ್ಛೇದನ ಪಡೆಯುವ ಮಟ್ಟಕ್ಕೆ ತಿರುಗಿತ್ತು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆಗ ರಾಜಿ ಸಂಧಾನದೊಂದಿಗೆ ಮನೆಗೆ ತೆರಳಿದ್ದ ಪುಷ್ಪ ನೇಣಿಗೆ ಶರಣಾಗಿದ್ದಾಳೆ.
ಮಾರ್ಗಮಧ್ಯೆ ಸಾವು
ಇದರ ಬೆನ್ನಲ್ಲೇ ಪುಷ್ಪ ಅಸ್ವಸ್ಥಳಾಗಿದ್ದು, ಪತಿ ಹರೀಶ್ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಆಕೆ ಕೊನೆಯುಸಿ ರೆಳೆದಿದ್ದಾಳೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಪುಷ್ಪ ಪೋಷಕರು ಹಾಗೂ ಸಂಬಂಧಿಕರು ಪತಿ ಹರೀಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ದಾಖಲು
ಇನ್ನು ಈ ಘಟನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಹರೀಶ್ ಎಸ್ಕೇಪ್ ಆಗಿದ್ದಾನೆ.
ಇದನ್ನು ನೋಡಿ : ದ್ವೇಷ ಭಾಷಣ ಮಸೂದೆ ವಿರುದ್ಧ ರೊಚ್ಚಿಗೆದ್ದ BJP




