Vaibhav Suryavanshi ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು.

ರಾಂಚಿಯಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟ್ರೋಫಿ ಪ್ಲೇಟ್ ಪಂದ್ಯದಲ್ಲಿ ಬಿಹಾರ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಭರ್ಜರಿ ಶತಕ ಸಿಡಿಸಿ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಕೇವಲ 14 ವರ್ಷದ ವಯಸ್ಸಿನಲ್ಲೇ ಏಕದಿನ (ಲಿಸ್ಟ್ ಎ) ಕ್ರಿಕೆಟ್ನಲ್ಲಿ ದಾಖಲೆ ನಿರ್ಮಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
36 ಎಸೆತಗಳಲ್ಲಿ ಶತಕ
ಅರುಣಾಚಲ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಿಹಾರ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್, ಮೊದಲ ಓವರ್ನಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅರುಣಾಚಲ ಪ್ರದೇಶ್ ಬೌಲರ್ಗಳನ್ನು ಬೆಂಡೆತ್ತಿದ ಅವರು ಕೇವಲ 36 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಅಚ್ಚರಿ ಮೂಡಿಸಿದರು.
ಇದನ್ನು ಓದಿ : ನಡು ರಸ್ತೆಯಲ್ಲಿ ಹೆಂಡತಿಗೆ ಗುಂಡಿಟ್ಟು ಜೀವ ತೆಗೆದ ಗಂಡ

ಅತೀ ವೇಗವಾಗಿ 150 ರನ್ ಸಿಡಿಸಿದ ಬ್ಯಾಟರ್
ಶತಕದ ನಂತರವೂ Vaibhav Suryavanshi, ಮೈದಾನದ ಎಲ್ಲಾ ದಿಕ್ಕುಗಳಿಗೂ ಸಿಕ್ಸ್–ಫೋರ್ಗಳ ಮಳೆ ಸುರಿಸಿದರು. ಪರಿಣಾಮ, ಕೇವಲ 54 ಎಸೆತಗಳಲ್ಲಿ 150 ರನ್ ಪೂರೈಸಿ ಲಿಸ್ಟ್ ಎ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 150 ರನ್ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ತಮ್ಮದಾಗಿಸಿಕೊಂಡರು.
ವಿಶ್ವ ದಾಖಲೆ
ಇದಕ್ಕೂ ಮೊದಲು ಈ ದಾಖಲೆ ದಕ್ಷಿಣ ಆಫ್ರಿಕಾದ ದಿಗ್ಗಜ ಬ್ಯಾಟರ್ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿತ್ತು. ಅವರು 2015ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 64 ಎಸೆತಗಳಲ್ಲಿ 150 ರನ್ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಆ ದಾಖಲೆಯನ್ನು ವೈಭವ್ ಮುರಿದಿದ್ದಾರೆ. ಅಂತಿಮವಾಗಿ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ 190 ರನ್ ಗಳಿಸಿ ಔಟಾದರು. ಅವರ ಇನಿಂಗ್ಸ್ನಲ್ಲಿ 15 ಸಿಕ್ಸ್ ಹಾಗೂ 16 ಫೋರ್ಗಳು ಸೇರಿದ್ದವು.

ಇದನ್ನು ನೋಡಿ : ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!




