Bus Fire : ಕ್ರಿಸ್ ಮಸ್ ದಿನವೇ ನಡೆದೆ ಹೋಯ್ತು ಘೋರ ಬಸ್ ದುರಂತ..!?

ಕ್ರಿಸ್ ಮಸ್ ದಿನವೇ ದೊಡ್ಡ ದುರಂತ ನಡೆದಿದ್ದು, ಖಾಸಗಿ ಸ್ಲೀಪರ್ ಬಸ್ ಬೆಂಕಿಗೆ ಹೊತ್ತಿ ಉರಿದಿದೆ. ಚಿತ್ರದುರ್ಗದಲ್ಲಿ ಖಾಸಗಿ ಟ್ರಾವೆಲ್ ಬಸ್ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 9 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಗೊರ್ಲತ್ತು ಕ್ರಾಸ್ ಬಳಿ ಅಪಘಾತ
ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಹಿರಿಯೂರಿನ ಜವನಗೊಂಡನಹಳ್ಳಿಯ ಗೊರ್ಲತ್ತು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್ ಎರಡೂ ಬೆಂಕಿ ಹೊತ್ತಿಕೊಂಡಿದ್ದವು.

8 ಮಂದಿ ಪ್ರಯಾಣಿಕರು ಸಾವ ಸಾವು
ಇನ್ನು ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅದರಲ್ಲಿದ್ದ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಲ್ಲದೆ, ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ.
ಬಸ್ನಲ್ಲಿ ಸುಮಾರು 32 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ತಕ್ಷಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನು ಓದಿ : ಕುಟುಂಬ ಸಮೇತರಾಗಿ ರಾಯರ ದರ್ಶನ ಪಡೆದ ರಿಷಬ್ ಶೆಟ್ಟಿ
42 ಮಕ್ಕಳು ಸುರಕ್ಷಿತ
ಇದೇ ಸಂದರ್ಭದಲ್ಲಿ, ಅಪಘಾತವಾಗಿ ಸುಟ್ಟು ಕರಕಲಾಗಿರುವ ಬಸ್ ಸರಿಸಮವಾಗಿ ಚಲಿಸುತ್ತಿದ್ದ ಶಾಲಾ ಮಕ್ಕಳ ಪ್ರವಾಸದ ಬಸ್ ದಾಂಡೇಲಿಗೆ ತೆರಳುತ್ತಿತ್ತು.
ಅಪಘಾತವಾದ ಬಸ್ ಮಕ್ಕಳ ಬಸ್ಗೆ ಟಚ್ ಆಗಿದೆ. ಇದರಿಂದ ಮಕ್ಕಳಿದ್ದ ಬಸ್ ರಾಷ್ಟ್ರೀಯ ಹೆದ್ದಾರಿ ದಾಟಿ, ಚರಂಡಿಗೆ ಹೋಗಿ ನಿಂತಿದೆ. ಅ ಬಸ್ನಲ್ಲಿದ್ದ 42 ಮಕ್ಕಳು ಸುರಕ್ಷಿತವಾಗಿದ್ದಾರೆ.

9 ಮಂದಿ ಸಜೀವ ದಹನ
ಒಟ್ಟಾರೆ ಈ ಖಾಸಗಿ Bus Fire ನಲ್ಲಿ ಸುಮಾರು 9 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಅದ್ರೆ ಕ್ರಿಸ್ ಮಸ್ ದಿನವೇ ಇಂತಹ ಘೋರ ದುರಂತ ಸಂಭವಿಸಿರುವುದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಇದನ್ನು ನೋಡಿ : ತುಮಕೂರಲ್ಲಿ MARK MOVIE ಅಬ್ಬರ KICCHAನ FANS REACTION ಹೇಗಿದೆ ನೋಡಿ




