Mysore ನಲ್ಲಿ ನೈಟ್ರೋಜನ್ ಗ್ಯಾಸ್ ಸಿಡಿದು ಓರ್ವ ಸ್ಥಳದಲ್ಲೇ ಸಾವು.

Mysore ಅರಮನೆ ಮುಂಭಾಗದಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಬಲೂನ್ ಗೆ ನೈಟ್ರೋಜನ್ ತುಂಬುವ ವೇಳೆ ಇದ್ದಕ್ಕಿದ್ದ ಹಾಗೆ ಸ್ಫೋಟಗೊಂಡಿದ್ದು, ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗ್ಯಾಸ್ ತುಂಬಿಸುವಾಗ ವೇಳೆ ಭಾರೀ ಸ್ಫೋಟ
ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ನೆನ್ನೆ ರಾತ್ರಿ ಪ್ಯಾಲೆಸ್ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಇದರ ತೀವ್ರತೆ ಎಷ್ಟಿತ್ತು ಎಂದರೆ ಸಿಲಿಂಡರ್ ಛಿದ್ರ ಛೀದ್ರವಾಗಿದೆ. ಸ್ಥಳಕ್ಕೆ KR ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸ್ಫೋಟಕ್ಕೆ ಸಾಂಸ್ಕೃತಿಕ ನಗರಿ ಜನ ಬೆಚ್ಚಿಬಿದ್ದಿದ್ದಾರೆ.
ಇದನ್ನು ಓದಿ : Dina Bhavishya|ದಿನ ಭವಿಷ್ಯ 26 ಡಿಸೆಂಬರ್ 2025
ಓರ್ವ ಸಾವು, ಮೂವರು ಗಂಭೀರ
ಇನ್ನು ಬಲೂನ್ ಗೆ ಗ್ಯಾಸ್ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದರೆ ಬೆಂಗಳೂರು ಮೂಲದ ಲಕ್ಷ್ಮಿ ಸ್ಥಿತಿ ಗಂಭೀರವಾಗಿದೆ.
ಇನ್ನು ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ, ಕೋಲ್ಕತ್ತಾ ಮೂಲದ ಶಾಹಿನಾ ಶಬ್ಬಿರ್ , ರಾಣೆಬೆನ್ನೂರು ಮೂಲದ ಕೊಟ್ರೇಶ್ ಎಂಬುವರಿಗೂ ಗಾಯಗಳಾಗಿದ್ದು, ಸದ್ಯ ಇವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ನೋಡಿ : ಅರ್ಧದಲ್ಲೇ ಹನಿಮೂನ್ನಿಂದ ವಾಪಸ್ಸಾಗಿ ಆತ್ಮಹತ್ಯೆ ಯತ್ನ – ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ನವವಧು ಸಾವು




