ಬೆಂಗಳೂರಿನಲ್ಲಿ ಭೀಕರ Accident.

ಬೆಂಗಳೂರು ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತೋಟಗೇರಿ ಕ್ರಾಸ್ ಬಳಿ Accident
ಈ ದುರ್ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ತೋಟಗೇರಿ ಕ್ರಾಸ್ ಬಳಿ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್ (39) ಮತ್ತು ವೀರಭದ್ರ (80) ಎಂಬುವವರು ಮೃತ ದುರ್ದೈವಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರಿನಲ್ಲಿ ಇದ್ದ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನು ಓದಿ : ತುಮಕೂರಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ
ಸಾಫ್ಟ್ವೇರ್ ಇಂಜಿನಿಯರ್
ಮೃತ ಹರೀಶ್ ದಾಸರಹಳ್ಳಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದು, ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬವು ಜಮೀನು ವಿಚಾರಕ್ಕೆ ತೆರಳಿ ವಾಪಸ್ ಬರುವಾಗ ಈ Accident ಸಂಭವಿಸಿದೆ ಎಂದು ತಿಳಿದುಬಂದಿದೆ.
ಪೊಲೀಸರು ಪರಿಶೀಲನೆ
ಇನ್ನು ಘಟನೆಯ ಮಾಹಿತಿ ಪಡೆದ ತಕ್ಷಣ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.
ಇದನ್ನು ನೋಡಿ : ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯ ರೆಕಾರ್ಡ್ ಮಾಡುತ್ತಿದ್ದವ ಅರೆಸ್ಟ್




