
CHIKKAMAGALURU NEWS : ಹಾಸನ ಜಿಲ್ಲೆಯ ಬೇಲೂರಿನಲ್ಲಿ ಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಅಪರಾಧದಲ್ಲಿ ಶಂಕಿತ ಮಹಿಳೆಯೊಬ್ಬಳಿಗಾಗಿ ಪೊಲೀಸರು ಚಿಕ್ಕಮಗಳೂರಿನಲ್ಲಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಶಂಕಿತ ಮಹಿಳೆ ಚಿಕ್ಕಮಗಳೂರು ಬಸ್ ನಿಲ್ದಾಣದ ಭಾಗದಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೇಲೂರು ಠಾಣೆಯ ಪೊಲೀಸರು ಚಿಕ್ಕಮಗಳೂರಿಗೆ ತೆರಳಿ, ಸ್ಥಳೀಯ ಪೊಲೀಸರ ಸಹಕಾರದಿಂದ ಬಸ್ ನಿಲ್ದಾಣ ಸೇರಿದಂತೆ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ.
ಚಿಕ್ಕಮಗಳೂರು ಉಪವಿಭಾಗದ ಪೊಲೀಸ್ ಅಧಿಕಾರಿ (ಡಿವೈಎಸ್ಪಿ) ಶೈಲೇಂದ್ರ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ. ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಈ ಘಟನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮಹಿಳೆಯನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರು ತಿಳಿಸಿದ್ದಾರೆ.




