Karnataka Weather Forecast : ಕರ್ನಾಟಕದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದು, ರಾಜ್ಯದೆಲ್ಲೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ.

Karnataka Weather Forecast : ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ..
ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೆಳಗಿನ ಸಮಯದಲ್ಲಿ ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಸೂಚಿಸಲಾಗಿದೆ.
ಇದೇ ವೇಳೆ, ತೀವ್ರ ಚಳಿಯಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಬೆಚ್ಚನೆಯ ಉಡುಪು ಧರಿಸುವುದು ಮತ್ತು ಬಿಸಿ ಆಹಾರ ಸೇವನೆ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಒಣ ಹವೆ – ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳ ಹವಾಮಾನ – ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳ ಪಟ್ಟಿ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಇಂದೂ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನಲ್ಲೂ ಚಳಿ ಮುಂದುವರಿಕೆ
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಹವಾಮಾನ ಇಲಾಖೆಯು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
- ಬೆಚ್ಚನೆಯ ಉಡುಪು ಧರಿಸಿ
- ಸಮತೋಲನ ಆಹಾರ ಸೇವಿಸಿ
- ಬೆಳಗಿನ ಸಮಯದಲ್ಲಿ ಮಂಜಿನ ಕಾರಣ ರಸ್ತೆ ಸಂಚಾರದಲ್ಲಿ ಜಾಗ್ರತೆ ವಹಿಸಿ




