Halemane Shivananjappa : ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ತುಮುಲ್) ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿ ಮುಖಂಡ ಹಳೇಮನೆ ಶಿವನಂಜಪ್ಪ (79) ಅವರು ಶನಿವಾರ ವಿಧಿವಶರಾಗಿದ್ದಾರೆ.

Halemane Shivananjappa : ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ತುಮುಲ್) ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿ ಮುಖಂಡ ಹಳೇಮನೆ ಶಿವನಂಜಪ್ಪ (79) ಅವರು ಶನಿವಾರ ವಿಧಿವಶರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಅಪಾರ ಬಂಧು-ಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
ಇದನ್ನು ಓದಿ : ತುಮಕೂರಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ
ಗಣನೀಯ ಸೇವೆ
ಹಳೇಮನೆ ಶಿವನಂಜಪ್ಪ ಅವರು ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಅವರ ಅವಧಿಯಲ್ಲಿ ಒಕ್ಕೂಟವು ಅನೇಕ ಮೈಲಿಗಲ್ಲುಗಳನ್ನು ಸ್ಥಾಪಿಸಿತ್ತು. ರೈತರ ಹಿತರಕ್ಷಣೆ ಮತ್ತು ಹೈನುಗಾರಿಕೆಯನ್ನು ಲಾಭದಾಯಕವಾಗಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಕೇವಲ ಹಾಲು ಒಕ್ಕೂಟ ಮಾತ್ರವಲ್ಲದೆ, ಜಿಲ್ಲೆಯ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಅಂತಿಮ ಸಂಸ್ಕಾರ
ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಸ್ವಗ್ರಾಮದಲ್ಲಿ ವ್ಯವಸ್ಥೆ ಮಾಡಲಾಗಿದೆ. ಡಿ.28ರಂದು ಭಾನುವಾರ 11 ಗಂಟೆಯ ಸುಮಾರಿಗೆ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.
ಇದನ್ನು ನೋಡಿ : ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯ ರೆಕಾರ್ಡ್ ಮಾಡುತ್ತಿದ್ದವ ಅರೆಸ್ಟ್




