ವಿಶಾಖಪಟ್ಟಣಂ-ದುವ್ವಾಡ ಮೂಲಕ ಎರ್ನಾಕುಲಂಗೆ ಹೋಗುತ್ತಿದ್ದ ಟಾಟಾನಗರ್-ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನಲ್ಲಿ Fire ಹೊತ್ತಿಕೊಂಡಿತು.

ಟಾಟಾನಗರ–ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಒಬ್ಬ ವ್ಯಕ್ತಿ ಮೃತಪಟ್ಟ ದುರ್ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ವಿಶಾಖಪಟ್ಟಣದಿಂದ ಸುಮಾರು 66 ಕಿಲೋಮೀಟರ್ ದೂರದಲ್ಲಿರುವ ಎಲಮಂಚಿಲಿ ರೈಲು ನಿಲ್ದಾಣದ ಬಳಿ ನಸುಕಿನ ಜಾವ ಸುಮಾರು 1 ಗಂಟೆ ವೇಳೆಗೆ ಸಂಭವಿಸಿದೆ.
2 ರೈಲು ಬೋಗಿಗಳಿಗೆ ಬೆಂಕಿ
ರೈಲಿನ ಬಿ1 ಕೋಚ್ನಲ್ಲಿ Fire ಕಾಣಿಸಿಕೊಂಡಿರುವುದನ್ನು ಗಮನಿಸಿದ ಲೋಕೋ ಪೈಲಟ್ ತಕ್ಷಣವೇ ಎಲಮಂಚಿಲಿ ನಿಲ್ದಾಣದ ಬಳಿ ರೈಲನ್ನು ನಿಲ್ಲಿಸಿದರು. ಬಿ1 ಬೋಗಿಯಲ್ಲಿ ಪ್ರಾರಂಭವಾದ ಬೆಂಕಿ ಪಕ್ಕದ ಎಂ1 ಮತ್ತು ಬಿ2 ಬೋಗಿಗಳಿಗೆ ವೇಗವಾಗಿ ಹರಡಿತು ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ : ಬೆಂಗಳೂರಿನಲ್ಲಿ ಡಿ.31ರಂದು ಬೆಳಿಗ್ಗೆ 6ರಿಂದ ತಡರಾತ್ರಿ 1ರವರೆಗೆ ಮದ್ಯ ವಹಿವಾಟಿಗೆ ಅನುಮತಿ

ಬಿ1 ಕೋಚ್ ಸಂಪೂರ್ಣವಾಗಿ ಬೆಂಕಿಗೆ ಆಹುತಿ
ಬೆಂಕಿ ಮತ್ತಷ್ಟು ಬೋಗಿಗಳಿಗೆ ಹರಡದಂತೆ ತಡೆಯಲು, ಬೆಂಕಿ ಹೊತ್ತಿಕೊಂಡ ಬೋಗಿಗಳನ್ನು ರೈಲಿನ ಉಳಿದ ಭಾಗಗಳಿಂದ ತಕ್ಷಣವೇ ಬೇರ್ಪಡಿಸಲಾಯಿತು. ಬಿ1 ಕೋಚ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಎಂ1 ಮತ್ತು ಬಿ2 ಬೋಗಿಗಳಿಗೂ ತೀವ್ರ ಹಾನಿಯಾಗಿದೆ.
ಒಬ್ಬ ವ್ಯಕ್ತಿಯ ಮೃತದೇಹ ಪತ್ತೆ
ಘಟನೆಯ ಸಮಯದಲ್ಲಿ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರದೃಷ್ಟವಶಾತ್, ಬಿ1 ಕೋಚ್ನಲ್ಲಿ ಒಬ್ಬ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ.

ತನಿಖೆ ಆರಂಭ
ಈ ವೇಳೆ ರೈಲು ಜಾರ್ಖಂಡ್ನ ಟಾಟಾನಗರದಿಂದ ಕೇರಳದ ಎರ್ನಾಕುಲಂ ಕಡೆಗೆ ಪ್ರಯಾಣಿಸುತ್ತಿತ್ತು. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದರ ಕುರಿತು ರೈಲ್ವೇ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ನೋಡಿ : CHEETHA | ತಿಪಟೂರು ಜನರಿಗೆ ತಪ್ಪದ ಸಂಕಷ್ಟ – ಚಿರತೆ ಸೆರೆ ಸಿಕ್ಕರು ಜನರಿಗೆ ಚಿಂತೆ




