ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ NCERT ಭರ್ಜರಿ ಸಿಹಿ ಸುದ್ದಿ ನೀಡಿದೆ.

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಭರ್ಜರಿ ಸಿಹಿ ಸುದ್ದಿ ನೀಡಿದೆ. ವಿವಿಧ ವಿಭಾಗಗಳ ಅಡಿಯಲ್ಲಿ ಖಾಲಿ ಇರುವ ಬೋಧಕೇತರ (Non-Teaching) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್ 27ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಇನ್ನು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜನವರಿ 16, 2026ರೊಳಗೆ NCERTನ ಅಧಿಕೃತ ವೆಬ್ಸೈಟ್ ncert.nic.in ಮೂಲಕ ಅರ್ಜಿ ಸಲ್ಲಿಸಬಹುದು.
173 ಹುದ್ದೆಗಳ ಭರ್ತಿ
ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 173 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ
- ಗ್ರೂಪ್ ಎ: 138 ಹುದ್ದೆಗಳು
- ಗ್ರೂಪ್ ಬಿ: 26 ಹುದ್ದೆಗಳು
- ಗ್ರೂಪ್ ಸಿ: 9 ಹುದ್ದೆಗಳು
ಬಿಸಿನೆಸ್ ಮ್ಯಾನೇಜರ್, ಸೂಪರಿಂಟೆಂಡಿಂಗ್ ಎಂಜಿನಿಯರ್, ಜೂನಿಯರ್ ಹಿಂದಿ ಅನುವಾದಕ ಸೇರಿದಂತೆ ವಿವಿಧ ತಾಂತ್ರಿಕ ಮತ್ತು ಆಡಳಿತಾತ್ಮಕ ಹುದ್ದೆಗಳು ಸೇರಿವೆ.
ವಿದ್ಯಾರ್ಹತೆ
ಪ್ರತಿ ಹುದ್ದೆಗೆ ವಿಭಿನ್ನ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.
- ಸೂಪರಿಂಟೆಂಡಿಂಗ್ ಎಂಜಿನಿಯರ್: ಎಲೆಕ್ಟ್ರಾನಿಕ್ಸ್ ಅಥವಾ ಮಾಹಿತಿ ತಂತ್ರಜ್ಞಾನದಲ್ಲಿ ಎಂಜಿನಿಯರಿಂಗ್ ಪದವಿ ಮತ್ತು ಕನಿಷ್ಠ 12 ವರ್ಷಗಳ ಅನುಭವ
- ಜೂನಿಯರ್ ಹಿಂದಿ ಅನುವಾದಕ: ಹಿಂದಿಯಲ್ಲಿ ಸ್ನಾತಕೋತ್ತರ ಪದವಿ
ಇತರ ಹುದ್ದೆಗಳ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು NCERTನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ, ‘Vacancy’ ವಿಭಾಗದಲ್ಲಿ ‘Non-Teaching Recruitment 2025’ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಯಕ್ತಿಕ ಮಾಹಿತಿ ಮತ್ತು ಶೈಕ್ಷಣಿಕ ದಾಖಲೆಗಳನ್ನು ಅಪ್ಲೋಡ್ ಮಾಡಿ, ನಿಗದಿತ ಅರ್ಜಿ ಶುಲ್ಕ ಪಾವತಿಸುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ವಯೋಮಿತಿ, ಮೀಸಲಾತಿ ಮತ್ತು ಶುಲ್ಕ ವಿವರಗಳ ಕುರಿತು ಸಂಪೂರ್ಣ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನದಿಂದ ಓದಲು ಸೂಚಿಸಲಾಗಿದೆ. ತಾಂತ್ರಿಕ ಸಮಸ್ಯೆಗಳನ್ನು ತಪ್ಪಿಸಲು ಅಭ್ಯರ್ಥಿಗಳು ಕೊನೆಯ ದಿನದ ನಿರೀಕ್ಷೆ ಮಾಡದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ.
ಆಯ್ಕೆ ಪ್ರಕ್ರಿಯೆ
ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬಳಿಕ ಆಯ್ಕೆಯಾದ ಅಭ್ಯರ್ಥಿ ಗಳನ್ನು ಸಂದರ್ಶನ ಹಾಗೂ ಮೂಲ ದಾಖಲೆಗಳ ಪರಿಶೀಲನೆಗೆ ಆಹ್ವಾನಿಸಲಾಗುತ್ತದೆ. ರಾಷ್ಟ್ರಮಟ್ಟದ ಪ್ರತಿಷ್ಠಿತ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಹೊಂದಿರುವವರಿಗೆ ಇದು ಒಂದು ಸುವರ್ಣಾವಕಾಶವಾಗಿದ್ದು, ದೆಹಲಿ ಸೇರಿದಂತೆ ದೇಶದ ವಿವಿಧ NCERT ಕೇಂದ್ರಗಳಲ್ಲಿ ನೇಮಕಾತಿ ನಡೆಯುವ ಸಾಧ್ಯತೆಯಿದೆ.




