
HASSAN NEWS : ಹಾಸನ ಜಿಲ್ಲೆಯ ಬೇಲೂರಿನಲ್ಲಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾಕಿ ಮಾಡಿದ ಅಪಮಾನಕಾರಿ ಘಟನೆಯನ್ನು ಖಂಡಿಸಿ, ಹಿಂದೂಪರ ಸಂಘಟನೆಗಳು ಇಂದು ಬೇಲೂರು ಬಂದ್ಗೆ ಕರೆ ನೀಡಲಾಗಿದೆ.
ಸೆಪ್ಟೆಂಬರ್ 20ರ ರಾತ್ರಿ, ವಿಜಯನಗರ ಬಡಾವಣೆಯ ಲೀಲಮ್ಮ ಎಂಬ ಅಸ್ವಸ್ಥ ಮಹಿಳೆ, ಬೇಲೂರಿನ ಗಣೇಶ ದೇವಸ್ಥಾನದಲ್ಲಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿದೆ. ಪೊಲೀಸರು ಮಹಿಳೆಯನ್ನು ವಶಕ್ಕೆ ತೆಗೆದುಕೊಂಡಿದ್ದು,ಅಸ್ವಸ್ಥ ಮಹಿಳೆಯ ಕೃತ್ಯದ ಹಿಂದೆ ಯಾರಿದ್ದಾರೆಂದು ತನಿಖೆ ನಡೆಸುವಂತೆ ಒತ್ತಾಯಿಸಿ ಬಂದ್ಗೆ ಕರೆ ನೀಡಲಾಗಿದೆ.
ಬಂದ್ ಹಿನ್ನೆಲೆ ಪಟ್ಟಣದಲ್ಲಿ ಬಹುತೇಕ ಬಂದ್ ವಾತಾವರಣ ನಿರ್ಮಾಣವಾಗಿದೆ. ವರ್ತಕರು ಸ್ವಯಂಪ್ರೇ ರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿ ದ್ದಾರೆ. ಇಂದು ಬೆಳಗ್ಗೆ 10: 30ರ ಬಳಿಕ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿ ಭಟನಾ ಮೆರವಣಿಗೆ ನಡೆಸಲು ಸಜ್ಜಾಗಿ ದ್ದಾರೆ. ಸಾರ್ವಜನಿಕ ಶಾಂತಿ ಕಾಪಾಡಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಂದ್ ಶಾಂತಿಯುತವಾಗಿ ನಡೆಯಲು ಕ್ರಮ ಕೈಗೊಳ್ಳಲಾಗಿದೆ.





