Mysterious Death : ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ ಮಗನ ಶವ ಪತ್ತೆಯಾಗಿದ್ದು, ಶವಗಳನ್ನ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

Mysterious Death : ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ ಮಗನ ಶವ ಪತ್ತೆಯಾಗಿದ್ದು, ಶವಗಳನ್ನ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮೃತರನ್ನು ಬೊಪಸಂದ್ರ ಗ್ರಾಮದ ನಿವಾಸಿ 30 ವರ್ಷದ ಹಂಸಲೇಖ ಮತ್ತು ಆಕೆಯ ಮಗ 10 ವರ್ಷದ ಬಾಲಕ ಗುರು ಪ್ರಸಾದ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ–ಮಗ ಶವ ಪತ್ತೆ
ಇನ್ನು ಕಳ್ಳಂಬೆಳ್ಳ ಕೆರೆಯಲ್ಲಿ ಇಬ್ಬರ ಶವ ತೇಲಿ ಬಂದಿದ್ದು, ಕೆರೆಯ ಬಳಿ ಬಂದ ಜನರು ಶವ ಕಂಡು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಭೇಟಿ ಪರಿಶೀಲನೆ
ವಿಷಯ ತಿಳಿದು ಶಿರಾ ಗ್ರಾಮಾಂತರ ಉಪ ವಿಭಾಗದ ಡಿವೈಎಸ್ಪಿ ಬಿ.ಕೆ. ಶೇಖರ್, ಶಿರಾ ಗ್ರಾಮಾಂತರ ಸಿಪಿಐ ಶ್ರೀನಿವಾಸ್ ಮತ್ತು ಬೊಪಸಂದ್ರ ಪಿಡಿಓ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಇದನ್ನೂ ಓದಿ : Sira : ಶಿರಾದ ದೊಡ್ಡಕೆರೆಯಲ್ಲಿ ಅಪರಿಚಿತ ಶವ ಪತ್ತೆ..!
ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ಆತ್ಮಹತ್ಯೆ ಶಂಕೆ
ಪ್ರಾಥಮಿಕ ಮಾಹಿತಿ ಪ್ರಕಾರ ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ತಾಯಿ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ರಾ ಎಂದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
MUST WATCH : APMC ಬಳಿ ಅನಾಮಿಕ ಶ* ಪತ್ತೆ – ಶ* ಕಂಡು ಬೆಚ್ಚಿ ಬಿದ್ದ ಸ್ಥಳೀಯರು




