Chikkaballapura : ಹೊಸ ವರ್ಷಾಚರಣೆಗೆ (New Year Celebration) ಕೌಂಟ್ ಡೌನ್ ಶುರುವಾಗಿದ್ದು, ಎಲ್ಲೆಲ್ಲೂ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗ್ತಿದೆ. ಆದ್ರೆ ನಂದಿ ಗಿರಿಧಾಮದಲ್ಲಿ (Nandi Hills) ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.

Chikkaballapura : ಹೊಸ ವರ್ಷಾಚರಣೆಗೆ ಕೌಂಟ್ಡೌನ್ ಆರಂಭವಾಗಿದ್ದು, ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಆದರೆ, ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ, ಡಿಸೆಂಬರ್ 31 ರಂದು ಮಧ್ಯಾಹ್ನ 2 ಗಂಟೆಯಿಂದ ಹೊಸ ವರ್ಷವಾದ ಜನವರಿ 1ರ ಬೆಳಿಗ್ಗೆ 10 ಗಂಟೆಯವರೆಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರತಿವರ್ಷ ಹೊಸ ವರ್ಷದಂದು ನಂದಿ ಬೆಟ್ಟಕ್ಕೆ ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ, ಜನಸಂದಣಿ ನಿಯಂತ್ರಣ ಹಾಗೂ ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಹೊಸ ವರ್ಷ ಆಚರಣೆಗೆ ಪೊಲೀಸರಿಂದ ಗೈಡ್ಲೈನ್ಸ್..!

ಆದರೆ, ನಂದಿ ಬೆಟ್ಟದ ಮೇಲ್ಭಾಗದಲ್ಲಿರುವ ಹೋಟೆಲ್ಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಬುಕ್ ಮಾಡಿಕೊಂಡಿರುವ ಪ್ರವಾಸಿಗರಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಇದು ಅಗತ್ಯ ಕ್ರಮ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
MUST WATCH : NEW YEAR CELEBRATION PLAN ಮಾಡ್ತಿದ್ರಾ? ಇಲ್ಲಿದೆ ಒಂದು ಬಂಪರ್ ಸುದ್ದಿ




