ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ Suicide.

ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಅವರು Suicide ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ.
ಹಲವು ಧಾರಾವಾಹಿಗಳಲ್ಲಿ ಪೋಷಕ ಪಾತ್ರ
ಮೂಲತಃ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರಾದ ನಂದಿನಿ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ಜೀವ ಹೂವಾಗಿದೆ, ಸಂಘರ್ಷ, ಮಧುಮಗಳು, ನೀನಾದೆ ನಾ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸಿ ಅವರು ಗುರುತಿಸಿಕೊಂಡಿದ್ದರು. ಜೊತೆಗೆ ತಮಿಳು ಕಿರುತೆರೆಯಲ್ಲಿಯೂ ಅವರು ಸಕ್ರಿಯರಾಗಿದ್ದು, ಗೌರಿ ಧಾರಾವಾಹಿಯಲ್ಲಿ ‘ಕನಕ’ ಹಾಗೂ ‘ದುರ್ಗಾ’ ಎಂಬ ದ್ವಿಪಾತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದರು.
ಇದನ್ನು ಓದಿ : ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ.!

ಪ್ರಕರಣ ದಾಖಲು
ನಂದಿನಿ ಅವರ ನಿಧನದ ಕುರಿತು ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ನಂದಿನಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ನಂದಿನಿ
ನಂದಿನಿ ಅವರ ತಂದೆ ಸರ್ಕಾರಿ ಶಾಲಾ ಶಿಕ್ಷಕರಾಗಿದ್ದು, ಮೂರು ವರ್ಷಗಳ ಹಿಂದೆ ನಿಧನರಾಗಿದ್ದರು. ತಂದೆಯ ನಿಧನದ ನಂತರ ಕುಟುಂಬದವರು ಶಿಕ್ಷಕ ವೃತ್ತಿಯನ್ನು ಸ್ವೀಕರಿಸುವಂತೆ ಒತ್ತಾಯಿಸಿದ್ದರೂ, ಆ ಕೆಲಸದ ಮೇಲಿನ ಆಸಕ್ತಿ ನಂದಿನಿಗೆ ಇರಲಿಲ್ಲ ಎನ್ನಲಾಗಿದೆ. ಇದಲ್ಲದೆ ಅವರು ಅನಾರೋಗ್ಯ ಸಮಸ್ಯೆಯಿಂದಲೂ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಅಸಹಜ ಸಾವು
ಇನ್ನು ಈ ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : ತುಮಕೂರಿಗರೇ ಹುಷಾರ್ – ಈ ROWDY DOCTOR ಹತ್ತಿರ TREATMENT ತಗೊಂಡ್ರೆ ಜೀವಕ್ಕೆ ಗ್ಯಾರಂಟಿನೇ ಇಲ್ಲ..?




