Bus Accident : ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.

Bus Accident : ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆ (BEST)ಗೆ ಸೇರಿದ ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿರುವ ಘಟನೆ ಮುಂಬೈನ ಭಾಂಡಪ್ ಪ್ರದೇಶದಲ್ಲಿ ಸಂಭವಿಸಿದೆ.
ರಿವರ್ಸ್ ತೆಗೆಯುವಾಗ ಬಸ್ ಡಿಕ್ಕಿ
ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಯಂತ್ರಣ ತಪ್ಪಿದ ಬಸ್ ಪಾದಚಾರಿಗಳಿಗೆ ಡಿಕ್ಕಿ
ಮುಂಬೈ ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ಬಸ್ ಚಾಲಕನು ಮಾರ್ಗದ ಕೊನೆಯ ಹಂತದಲ್ಲಿ ಬಸ್ ಅನ್ನು ಹಿಮ್ಮುಖವಾಗಿ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ಬಸ್ ಡಿಕ್ಕಿ ಹೊಡೆದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ತುರ್ತು ಪ್ರತಿಕ್ರಿಯೆ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ : ಖಾಸಗಿ ಬಸ್ಸಿನ ಎಂಜಿನ್ನಲ್ಲಿ ಹೊಗೆ..! ತಪ್ಪಿದ ಭಾರೀ ಅನಾಹುತ
ಅಪಘಾತದ ಕುರಿತು ಪೊಲೀಸ್ ತನಿಖೆ ಆರಂಭ
ಅಪಘಾತದ ವೇಳೆ ಬಸ್ ಚಾಲಕ ಸಂತೋಷ್ ರಮೇಶ್ ಸಾವಂತ್ (52) ಬಸ್ ಚಾಲನೆ ಮಾಡುತ್ತಿದ್ದು, ಭಗವಾನ್ ಭಾವು ಘರೆ (47) ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದ ನಿಖರ ಕಾರಣಗಳ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಾಪ
ಘಟನೆಯ ಕುರಿತು ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ. ಈ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಅವರು ಕಂಬನಿ ಮಿಡಿದಿದ್ದಾರೆ.
MUST WATCH : ತುಮಕೂರಿಗರೇ ಹುಷಾರ್ – ಈ ROWDY DOCTOR ಹತ್ತಿರ TREATMENT ತಗೊಂಡ್ರೆ ಜೀವಕ್ಕೆ ಗ್ಯಾರಂಟಿನೇ ಇಲ್ಲ..?




