Tumakuru : ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದಲ್ಲಿ ನಡೆದ ತಾಯಿ–ಮಗ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪರಪುರುಷನ ಸಹವಾಸದ ವಿಚಾರದಲ್ಲಿ ನಡೆದ ಬ್ಲ್ಯಾಕ್ಮೇಲ್ ಈ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

Tumakuru : ಮೃತ ಮಹಿಳೆ ಹಂಸಲೇಖ (32) ಪರಪುರುಷನೊಂದಿಗೆ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ದೂರವಾಣಿ ಸಂಭಾಷಣೆ ಹಾಗೂ ವಿಡಿಯೋಗಳನ್ನು ಮುಂದಿಟ್ಟುಕೊಂಡು ಆಕೆಯನ್ನು ಬ್ಲ್ಯಾಕ್ಮೇಲ್ ಮಾಡಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಇದರಿಂದ ಮಾನಸಿಕವಾಗಿ ಕುಗ್ಗಿದ ಹಂಸಲೇಖ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿರುವುದು ತನಿಖೆಯಿಂದ ಬಹಿರಂಗವಾಗಿದೆ.
8 ವರ್ಷದ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ
ಬ್ಲ್ಯಾಕ್ಮೇಲ್ ಭೀತಿಯಿಂದ ಮನನೊಂದ ಹಂಸಲೇಖ, ತನ್ನ 8 ವರ್ಷದ ಪುತ್ರ ಗುರುಪ್ರಸಾದ್ನೊಂದಿಗೆ ಮನೆ ತೊರೆದಿದ್ದಳು.
ಶುಕ್ರವಾರ ಸ್ನೇಹಿತೆಯ ಮನೆಯಲ್ಲಿ ಉಳಿದುಕೊಂಡು, ಶನಿವಾರ ಬೆಳಗ್ಗೆ ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ–ಮಗ ಇಬ್ಬರೂ ನೀರಿಗೆ ಹಾರಿ ಸಾವನ್ನಪ್ಪಿದ್ದಾರೆ.
ಮಲ್ಲಿಕಾರ್ಜುನ ವಿರುದ್ಧ ಗಂಭೀರ ಆರೋಪ
ಮಲ್ಲಿಕಾರ್ಜುನ ಎಂಬಾತನೊಂದಿಗೆ ಹಂಸಲೇಖ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಆತನ ಬಳಿ ಇದ್ದ ಸಂಭಾಷಣೆ ಹಾಗೂ ವಿಡಿಯೋಗಳ ಆಧಾರದಲ್ಲಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಈ ವಿಷಯವೇ ಹಂಸಲೇಖನಿಗೆ ಭಾರೀ ಮಾನಸಿಕ ಒತ್ತಡ ತಂದಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ.!
ಪೊಲೀಸ್ ತನಿಖೆ ಆರಂಭ
ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕೆರೆಯಿಂದ ಹೊರತೆಗೆದು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಬ್ಲ್ಯಾಕ್ಮೇಲ್ ಆರೋಪದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಕುಟುಂಬ ಹಿನ್ನೆಲೆ
ಹಂಸಲೇಖ ಭೂಪಸಂದ್ರ ಗ್ರಾಮದ ನಾಗೇಶ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಇದ್ದರು. ಕೆಲ ವರ್ಷಗಳ ಹಿಂದೆ ಪತಿ ನಾಗೇಶ್ ಅನಾರೋಗ್ಯದಿಂದ ಮೃತಪಟ್ಟ ಬಳಿಕ,
ಮೂರು ವರ್ಷಗಳ ಹಿಂದೆ ನಾಗೇಶ್ ಸಹೋದರ ಲೋಕೇಶ್ ಜೊತೆ ಹಂಸಲೇಖಗೆ ಮದುವೆ ಮಾಡಲಾಗಿತ್ತು.
ಆದರೂ ಪರಪುರುಷನ ಸಹವಾಸವೇ ಈ ಭೀಕರ ಅಂತ್ಯಕ್ಕೆ ಕಾರಣವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಇದನ್ನು ನೋಡಿ : ತುಮಕೂರಿಗರೇ ಹುಷಾರ್ – ಈ ROWDY DOCTOR ಹತ್ತಿರ TREATMENT ತಗೊಂಡ್ರೆ ಜೀವಕ್ಕೆ ಗ್ಯಾರಂಟಿನೇ ಇಲ್ಲ..?




