Hassan : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

Hassan : ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಸಂತೆ ಮರೂರು ಗ್ರಾಮದ ಬಳಿ ಜೋಡಿ ಗುಬ್ಬಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಮೇಲೆ, ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್
ಘಟನೆಯಿಂದ ಭಯಭೀತರಾಗಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ತಮಗೆ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.
ಕಾಲೇಜು ವಿದ್ಯಾರ್ಥಿಗಳ ಮೇಲೆ ಸ್ಥಳೀಯ ಯುವಕರ ಹಲ್ಲೆ
ಜೋಡಿ ಗುಬ್ಬಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಂದಿನಂತೆ ಕಾಲೇಜಿಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಸಂತೆ ಮರೂರು ಗ್ರಾಮದ ಕೆಲವು ಯುವಕರು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳೊಂದಿಗೆ ಜಗಳ ತೆಗೆದಿದ್ದಾರೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು, ಯುವಕರ ಗುಂಪು ವಿದ್ಯಾರ್ಥಿಗಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದೆ.
ಇದನ್ನೂ ಓದಿ: ಬಾರ್ನಲ್ಲಿ ಸಿಗರೇಟ್ ವಿಚಾರಕ್ಕೆ ಗಲಾಟೆ- ಚಾಕುವಿನಿಂದ ಇರಿದು ಯುವಕನ ಮೇಲೆ ಹಲ್ಲೆ..!
ವಿದ್ಯಾರ್ಥಿನಿಯರಿಗೆ ಅವಾಚ್ಯ ನಿಂದನೆ, ಬೆದರಿಕೆ ಆರೋಪ
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಲಾಗಿದೆ ಎಂದು ಸಂತ್ರಸ್ತ ವಿದ್ಯಾರ್ಥಿಗಳು ದೂರಿದ್ದಾರೆ. ಕಾಲೇಜಿಗೆ ಹೋಗುವ ದಾರಿಯಲ್ಲೇ ಈ ರೀತಿಯ ಘಟನೆಗಳು ಮರುಕಳಿಸುತ್ತಿರುವುದರಿಂದ ವಿದ್ಯಾರ್ಥಿನಿಯರು ಕಾಲೇಜಿಗೆ ಬರಲು ಭಯಪಡುವಂತಾಗಿದೆ ಎನ್ನುತ್ತಿದ್ದಾರೆ.
ಒಟ್ಟಿನಲ್ಲಿ ಸಂತೆ ಮರೂರಿನಲ್ಲಿ ಇಂತಹ ಘಟನೆ ನಡೆದಿದ್ದು, ಕೂಡಲೇ ಸಂಬಂಧಪಟ್ಟ ಪೊಲೀಸ್ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ರಕ್ಷಣೆ ಒದಗಿಸುವ ಕಾರ್ಯಕ್ಕೆ ಮುಂದಾಗಬೇಕಿದೆ.
MUST WATCH : ಪುಡಿ ರೌಡಿಗಳ ಅಟ್ಟಹಾಸ ಕಾರನ್ನೇ ಪೀಸ್ ಪೀಸ್ ಮಾಡಿದ್ರು




