Doddaballapur : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಯಕರಂಡನಹಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾವ ಮತ್ತು ಬಾಮೈದ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

Doddaballapur : ಏಕಾಏಕಿ ಬ್ರೇಕ್ ಹಾಕಿದ ಲಾರಿ ಚಾಲಕ ..!!
ಮಾಹಿತಿಯಂತೆ, ಮುಂದೆ ಸಾಗುತ್ತಿದ್ದ ಸಿಮೆಂಟ್ ಬಲ್ಕರ್ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಇದರಿಂದ ಹಿಂಬದಿ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿದೆ.
ಅಪಘಾತದ ತೀವ್ರತೆಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರ ಗುರುತು
ಅಪಘಾತದಲ್ಲಿ ಮೃತಪಟ್ಟವರನ್ನು ಅಶೋಕ್ ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದೆ.ಇವರು ಮೂಲತಃ ಆಂಧ್ರಪ್ರದೇಶದ ಹಿಂದೂಪುರದ ನಿವಾಸಿಗಳು ಎನ್ನಲಾಗಿದೆ.
ವೀಕೆಂಡ್ ಹಿನ್ನೆಲೆ ಊರಿಗೆ ಬಂದಿದ್ದ ಅಶೋಕ್ ಮತ್ತು ಪವನ್ ಕುಮಾರ್ ಗ್ರಾಮದಲ್ಲಿ ಕಾಲ ಕಳೆದಿದ್ದರು.ಪವನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ, ಸೋಮವಾರ ಆಫೀಸ್ಗೆ ಹೋಗಲು ಬಸ್ ಸಿಗದೆ ಇದ್ದ ಹಿನ್ನೆಲೆಯಲ್ಲಿ ಬಾಮೈದ ಅಶೋಕ್ಗೆ ಡ್ರಾಪ್ ಕೊಡಲು ಕೇಳಿದ್ದಾನೆ.
ಹೀಗಾಗಿ ಇಬ್ಬರೂ ಬೈಕ್ನಲ್ಲಿ ಹಿಂದೂಪುರದಿಂದ ಯಲಹಂಕದ ಕಡೆಗೆ ಪ್ರಯಾಣಿಸುತ್ತಿದ್ದರು.
ಇದನ್ನು ಓದಿ : ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ.!
ಅಪಘಾತದ ನಂತರ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ.
ಆದರೆ ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಆಗಮಿಸದ ಕಾರಣ, ಇಬ್ಬರನ್ನೂ ಉಳಿಸಲು ಸಾಧ್ಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಲಾರಿ ಚಾಲಕ ಪರಾರಿ, ಪೊಲೀಸ್ ತನಿಖೆ
ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿ ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಅಕಾಲಿಕವಾಗಿ ಬಾವ–ಬಾಮೈದರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಒಂದು ಕ್ಷಣದ ಅಜಾಗರೂಕತೆ ಎರಡು ಕುಟುಂಬಗಳಿಗೆ ಅಸಾಧ್ಯವಾದ ನೋವನ್ನು ಬಿಟ್ಟುಹೋಗಿದೆ.
ಇದನ್ನು ನೋಡಿ : ತುಮಕೂರಿಗರೇ ಹುಷಾರ್ – ಈ ROWDY DOCTOR ಹತ್ತಿರ TREATMENT ತಗೊಂಡ್ರೆ ಜೀವಕ್ಕೆ ಗ್ಯಾರಂಟಿನೇ ಇಲ್ಲ..?




