Road Accident : ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾಲಶಿರಗೂರು ಬಳಿ ನಡೆದಿದೆ.

Road Accident : ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಹಾಲಶಿರಗೂರು ಬಳಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ 5ನೇ ತರಗತಿ ವಿದ್ಯಾರ್ಥಿ ಅಮಿತ್ ಕಾಂಬಳೆ (11) ಎಂಬಾತ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಸಿಮೆಂಟ್ ಲಾರಿ ಪಲ್ಟಿ – 5ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಕುಡಚಿ ಕಡೆಯಿಂದ ಹಾರೂಗೇರಿ ಕಡೆಗೆ ಹೊರಟಿದ್ದ ಲಾರಿಯ ತಿರುವಿನ ವೇಳೆ ಈ ಅಪಘಾತ ಸಂಭವಿಸಿದೆ, ಈ ವೇಳೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಅವರನ್ನು ಹಾರೂಗೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ಬಸ್ ಡಿಕ್ಕಿಯಾಗಿ ನಾಲ್ವರು ಸಾವು, 9 ಮಂದಿಗೆ ಗಾಯ..!
ಇಬ್ಬರು ಗಂಭೀರ ಗಾಯ
ಗಾಯಗೊಂಡವರು ಅಂಜಲಿ ಕಾಂಬಳೆ (15) ಮತ್ತು ಅವಿನಾಶ ಕಾಂಬಳೆ (14) ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಕ್ರೇನ್ ಮೂಲಕ ಲಾರಿಯನ್ನು ಎತ್ತಿ ಕೆಳಗೆ ಸಿಲುಕಿರುವವರ ರಕ್ಷಣೆಗೆ ಕ್ರಮ ಕೈಗೊಂಡಿದ್ದಾರೆ.
ಖಾಸಗಿ ಬಸ್ ಅಪಘಾತ
ಇದರ ಜೊತೆಗೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟ್ನಲ್ಲಿ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಧರೆಗೆ ಗುದ್ದಿ 10 ಜನರಿಗೆ ಗಂಭೀರ ಗಾಯಂಟಾಗಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಒಂದೂವರೆ ವರ್ಷದ ಮಗು ಮೃತಪಟ್ಟಿದ್ದು, ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ ಘಟನೆಗೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
MUST WATCH : ನೋಡು ನೋಡುತ್ತಿದಂತೆ ಲೈಟ್ ಕಂಬಕ್ಕೆ ಗುದ್ದಿತು ಕಾರು




