Bengaluru ಮಹಿಳೆಯೊಬ್ಬರು ತನ್ನ ಸೈಕೋ ಪತಿಯ ವಿರುದ್ಧ FIR ದಾಖಲಿಸಿದ್ದಾರೆ.

ಮನೆಯಲ್ಲಿ ಬೆತ್ತಲೆಯಾಗಿ ಓಡಾಡುವುದು, ಪೋನ್ನಲ್ಲಿ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ಗಂಡನ ವಿರುದ್ಧ ಪತ್ನಿ ದೂರು ದಾಖಲಿಸಿರುವ ಘಟನೆ Bengaluru ನಗರದಲ್ಲಿ ನಡೆದಿದೆ. ಸೈಕೋ ಪತಿಯ ವಿಚಿತ್ರ ವರ್ತನೆ, ಕಿರುಕುಳಕ್ಕೆ ಬೇಸತ್ತು ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಂಜುನಾಥ್ ಎಂಬಾತನ ವಿರುದ್ಧ ಪತ್ನಿ ದೂರು ನೀಡಿದ್ದಾಳೆ.
ಪತಿಯ ವರ್ತನೆ ಬದಲಾಗಿದೆ ಎಂದು ಆರೋಪ
ಈ ದಂಪತಿ ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳಾಗಿದ್ದರು. ಪರಿಚಯವು ಪ್ರೀತಿಗೆ ತಿರುಗಿದ್ದು, ಕುಟುಂಬದವರ ಒಪ್ಪಿಗೆಯೊಂದಿಗೆ 2025ರ ಸೆಪ್ಟೆಂಬರ್ 3ರಂದು ಚಿಂತಾಮಣಿಯಲ್ಲಿ ವಿವಾಹವಾಗಿದ್ದರು. ಮದುವೆಯ ನಂತರ ಆರಂಭದಲ್ಲಿ ಎಲ್ಲವೂ ಸರಾಗವಾಗಿದ್ದರೂ, ಕೆಲವೇ ದಿನಗಳಲ್ಲಿ ಪತಿಯ ವರ್ತನೆ ಸಂಪೂರ್ಣವಾಗಿ ಬದಲಾಗಿದೆ ಎಂದು ಪತ್ನಿ ಆರೋಪಿಸಿದ್ದಾರೆ.
ಇದನ್ನು ಓದಿ : ಮಲಯಾಳಂ ಸೂಪರ್ಸ್ಟಾರ್ ಮೋಹನ್ಲಾಲ್ ತಾಯಿ ನಿಧನ
ಲೈಂಗಿಕ ಕ್ರಿಯೆಗೆ ಒತ್ತಾಯ
ಫೋನ್ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿ, ಅದೇ ರೀತಿ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುತ್ತಾನೆ. ಮನೆಯಲ್ಲಿ ಎಲ್ಲರ ಮುಂದೆ ಬೆತ್ತಲೆಯಾಗಿ ಓಡಾಡುತ್ತಾನೆ. ಅತ್ತೆ ಮಾವನ ಮುಂದೆಯೇ ಬಟ್ಟೆಯಿಲ್ಲದೆ ಓಡಾಡುವುದಲ್ಲದೆ ಪ್ಯಾಸೇಜ್ಗೆ ಕೂಡ ಹೋಗಿ ಅಕ್ಕ ಪಕ್ಕದವರಿಗೂ ಮುಜುಗರ ಉಂಟುಮಾಡುತ್ತಾನೆ ಎಂದು ಪತ್ನಿ ಆರೋಪಿಸಿದ್ದಾಳೆ.
ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ
ಇದಲ್ಲದೆ, ಪತಿ ಅವಾಚ್ಯ ಶಬ್ದಗಳಿಂದ ನಿಂದಿಸಿ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ಕೊಟ್ಟು ಮನೆ ಬಿಟ್ಟು ಹೋಗಿದ್ದ. ಬಳಿಕ ಮತ್ತೆ ಮನೆ ಬಳಿ ಬಂದ ಆತ, ತನಗೆ ಮತ್ತು ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮತ್ತು ಹಲ್ಲೆಗೂ ಯತ್ನಿಸಿದ್ದಾನೆ. ಈ ಎಲ್ಲ ಕೃತ್ಯಗಳಿಗೆ ಅತ್ತೆ ಮತ್ತು ಮಾವ ಕೂಡ ಬೆಂಬಲ ನೀಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಈ ಸಂಬಂಧ ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ದೂರು ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : ರೇಣುಕಾಸ್ವಾಮಿ ಕೇಸ್ – ಆರೋಪಿ ಪವಿತ್ರಾ ಗೌಡ ಸೇರಿ ಮೂವರಿಗೆ ಮನೆಯೂಟಕ್ಕೆ ಅವಕಾಶ




