Bengaluru : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷವೂ ಹೊಸ ವರ್ಷವನ್ನು (New Year 2026) ಅದ್ಧೂರಿಯಾಗಿ ಸ್ವಾಗತಿಸಲು ಭರ್ಜರಿ ತಯಾರಿ ನಡೆದಿದೆ.

Bengaluru : ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಮಧ್ಯರಾತ್ರಿವರೆಗೆ ಸಂಭ್ರಮಿಸುವ ಜನರ ಸುರಕ್ಷತೆ ಹಾಗೂ ಸಂಚಾರ ಅನುಕೂಲಕ್ಕಾಗಿ Namma Metro ಹಾಗೂ BMTC ಸಮಯ ಮತ್ತು ಮಾರ್ಗಗಳನ್ನು ವಿಸ್ತರಿಸಿವೆ.
ನ್ಯೂ ಇಯರ್ ಸಂಭ್ರಮಕ್ಕೆ ಮೆಟ್ರೋ–ಬಸ್ಗಳ ಫುಲ್ ಸಪೋರ್ಟ್
ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಮೆಟ್ರೋ ಸಮಯವನ್ನು ತಡರಾತ್ರಿವರೆಗೆ ವಿಸ್ತರಿಸಲಾಗಿದೆ. ಜನಸಂದಣಿ ಹೆಚ್ಚಾಗುವ ಹಿನ್ನೆಲೆ ಸಮಯವನ್ನು ವಿಸ್ತರಿಸಲಾಗಿದೆ ಎಂದು BMRCL ತಿಳಿಸಿದೆ.
ಇಂದು ರಾತ್ರಿ 11 ಗಂಟೆಯಿಂದ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಪ್ರತಿ 8 ನಿಮಿಷಗಳಿಗೊಮ್ಮೆ, ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲು ಸಂಚಾರ ನಡೆಯಲಿದೆ.
ರಾತ್ರಿ 10 ಗಂಟೆಯಿಂದ MG ರೋಡ್ ಮೆಟ್ರೋ ನಿಲ್ದಾಣದಲ್ಲಿ ಎಂಟ್ರಿ ಮತ್ತು ಎಕ್ಸಿಟ್ ಸಂಪೂರ್ಣ ಬಂದ್ ಮಾಡಲಾಗುತ್ತದೆ. ಆದರೆ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳು ಕಾರ್ಯ ನಿರ್ವಹಿಸಲಿದ್ದು, ಈ ನಿಲ್ದಾಣಗಳನ್ನು ಬಳಸಿಕೊಳ್ಳಬೇಕಾಗಿದೆ.

ರಾತ್ರಿ 11 ಗಂಟೆಯ ನಂತರ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಕೌಂಟರ್ಗಳು ಮುಚ್ಚಲಾಗುತ್ತವೆ. ಪ್ರಯಾಣಿಕರು QR ಕೋಡ್ ಅಥವಾ ಡಿಜಿಟಲ್ ಟಿಕೆಟ್ ಬಳಸುವಂತೆ BMRCL ಮನವಿ ಮಾಡಿದೆ.
ಜನಸಂದಣಿ ಹಿನ್ನೆಲೆ ತಡರಾತ್ರಿವರೆಗೆ ನಮ್ಮ ಮೆಟ್ರೋ ಸಂಚಾರ
ಇನ್ನೂ BMTC ಕೂಡ ಪ್ರಯಾಣಿಕರ ಅನುಕೂಲಕ್ಕಾಗಿ ಇಂದು ತಡರಾತ್ರಿವರೆಗೆ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 11 ಗಂಟೆಯಿಂದ ತಡರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ.
ಇದನ್ನೂ ಓದಿ: ಹೊಸ ವರ್ಷ ಆಚರಣೆಗೆ ಪೊಲೀಸರಿಂದ ಗೈಡ್ಲೈನ್ಸ್..!
ಹೊಸ ವರ್ಷ 2026 ಸಂಭ್ರಮಕ್ಕೆ ಬೆಂಗಳೂರು ಸಜ್ಜು
ಪಾರ್ಟಿ ಹಾಲ್ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಗ್ರಾಹಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚಿನ ಜನಸಂದಣಿ ನಗರದೆಲ್ಲೆಡೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಹೊಸ ವರ್ಷದ ಸಂಭ್ರಮವನ್ನು ಸುರಕ್ಷಿತವಾಗಿ ಆಚರಿಸಿ, ಸಾರ್ವಜನಿಕ ಸಾರಿಗೆ ಸೇವೆಗಳನ್ನು ಬಳಸಿಕೊಳ್ಳುವಂತೆ BMRCL ಮತ್ತು BMTC ಸಾರ್ವಜನಿಕರಿಗೆ ಮನವಿ ಮಾಡಿವೆ.
MUST WATCH: NEW YEAR COUNT DOWN – ಬಾರ್, ರೆಸ್ಟೋರೆಂಟ್ ಮೇಲೆ ನಿರ್ಬಂಧ




