Bus Accident : ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ (Terrible Accident) ಸಂಭವಿಸಿದೆ. ಹಲವು ಪ್ರಯಾಣಿಕರನ್ನ ಹೊತ್ತೊಯ್ಯುತ್ತಿದ್ದ ಬಸ್ಗಳ ನಡುವೆ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಿವೆ.

Bus Accident : ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿದೆ.
ಫ್ಲೈಓವರ್ನಲ್ಲಿ ಸ್ಲೀಪರ್ ಕೋಚ್ ಬಸ್ಗಳ ಭೀಕರ ಅಪಘಾತ
ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಸ್ಲೀಪರ್ ಬಸ್ ಹಾಗೂ ಹಿಂದೆಗಡೆಯಿಂದ ಬರುತ್ತಿದ್ದ ಮತ್ತೊಂದು ಸ್ಲೀಪರ್ ಬಸ್ ನಡುವೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಚಂದಾಪುರ ಫ್ಲೈಓವರ್ ಮೇಲೆ ಸ್ಲೀಪರ್ ಬಸ್ಗಳು ಅಪಘಾತಕ್ಕೀಡಾಗಿದ್ದು, ಒಂದು ಬಸ್ಗೆ ಮತ್ತೊಂದು ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎರಡೂ ಬಸ್ಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

ಇದನ್ನೂ ಓದಿ: ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಸಾವು – ಮೃತರ ಸಂಖ್ಯೆ 7ಕ್ಕೆ ಏರಿಕೆ ..!!
ಬಸ್ ಗಳ ಮುಂಭಾಗ ಸಂಪೂರ್ಣ ಜಖಂ
ಎರಡೂ ಬಸ್ಗಳು ಅತಿವೇಗದಲ್ಲಿ ಸಂಚರಿಸುತ್ತಿದ್ದ ಕಾರಣ ಚಾಲಕರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
MUST WATCH : ಬೈಕ್ಗೆ ಗುದ್ದಿದ KSRTC ಬಸ್- ಯುವತಿ ಬಚಾವ್ ಆಗಿದ್ದೇ ರೋಚಕ




