ಹೊಸ ವರ್ಷಾಚರಣೆ ಸಂಬಂಧ Tumakuru ನಗರದ ದೇವರಾನಯದುರ್ಗ, ನಾಮದ ಚಿಲುಮೆ, ಬಸದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ.

ಹೊಸ ವರ್ಷಾಚರಣೆ ಸಂಬಂಧ Tumakuru ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ದೇವರಾಯನದುರ್ಗ, ನಾಮದ ಚಿಲುಮೆ ಹಾಗೂ ಮಂದಾರಗಿರಿ ಬೆಟ್ಟ ಪ್ರದೇಶಗಳಲ್ಲಿ ಸೆಕ್ಷನ್ 144 ಹೇರಲಾಗಿದೆ.
ನಿಷೇಧಾಜ್ಞೆ ಜಾರಿ
ಜಿಲ್ಲಾಡಳಿತದ ಆದೇಶದಂತೆ ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 8 ಗಂಟೆವರೆಗೆ ಹಾಗೂ ಜನವರಿ 1ರ ಸಂಜೆ 6 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಹೊಸ ವರ್ಷದ ಪ್ರಯುಕ್ತ ದೇವಸ್ಥಾನಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಹಗಲು ಸಮಯದಲ್ಲಿ ನಿರ್ಬಂಧವನ್ನು ಸಡಿಲಿಸಲಾಗಿದೆ.
ಅರಣ್ಯ ಪ್ರದೇಶದಲ್ಲಿ ಮೋಜು-ಮಸ್ತಿ ನಿಷೇಧ
ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶವಾಗಿರುವುದರಿಂದ, ಹೊಸ ವರ್ಷಾಚರಣೆ ಹೆಸರಿನಲ್ಲಿ ಮೋಜು–ಮಸ್ತಿ, ಅಕ್ರಮ ಕೂಟಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅರಣ್ಯ ಮತ್ತು ಪೊಲೀಸ್ ಇಲಾಖೆ ಸಂಯುಕ್ತವಾಗಿ ನಿಷೇಧಾಜ್ಞೆ ಜಾರಿಗೊಳಿಸಿದೆ.
ಇದನ್ನು ಓದಿ : ಟಾಕ್ಸಿಕ್ ಸಿನಿಮಾದಲ್ಲಿ ನಯನತಾರಾ ಲುಕ್ಗೆ ಫ್ಯಾನ್ಸ್ ಫಿದಾ.!

ಪ್ರವಾಸಿಗರ ದಂಡು – ಮಧ್ಯಾಹ್ನದ ಬಳಿಕ ಕ್ಲೋಸ್
ನಿಷೇಧಾಜ್ಞೆ ಸಂಜೆ ವೇಳೆಗೆ ಜಾರಿಯಾಗುವ ಹಿನ್ನೆಲೆ, ಈಗಾಗಲೇ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಮಧ್ಯಾಹ್ನದ ನಂತರ ಪ್ರವೇಶ ನಿರ್ಬಂಧವಾಗಲಿರುವ ಕಾರಣ ದೇವರಾಯನದುರ್ಗ ಹಾಗೂ ನಾಮದ ಚಿಲುಮೆ ಕಡೆ ಪ್ರವಾಸಿಗರು ಮುಗಿಬಿದ್ದು ಹೋಗುತ್ತಿದ್ದಾರೆ.
ಬಿಗಿ ಪೊಲೀಸ್ ಬಂದೋಬಸ್ತ್
ಪರಿಸ್ಥಿತಿ ನಿಯಂತ್ರಣದಲ್ಲಿ ಇರಿಸಲು ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಬಿಗಿ ಭದ್ರತಾ ವ್ಯವಸ್ಥೆ ಮಾಡಿದ್ದು, ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಾರ್ವಜನಿಕರು ನಿಯಮಗಳನ್ನು ಪಾಲಿಸಿ ಶಾಂತಿಯುತವಾಗಿ ಹೊಸ ವರ್ಷ ಆಚರಿಸುವಂತೆ ತಿಳಿಸಿದೆ.

ಇದನ್ನು ನೋಡಿ : ಬೆಂಗಳೂರು | ಪ್ರತಿಷ್ಠಿತ ಕಂಪನಿಯ 6ನೇ ಮಹಡಿಯಿಂದ ಬಿದ್ದು ಯುವಕ ಸಾವು




