Bagalakote : KSRTC ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ.

Bagalakote : ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಚಾಲಕನ ಕಾಲು ತುಂಡಾಗಿ, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಲೋಕಾಪುರ ಹೊರವಲಯದಲ್ಲಿ ನಡೆದಿದೆ.
KSRTC ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ
ಬೆಳಗಾವಿ–ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಎದುರಿಗೆ ಬರುತ್ತಿದ್ದ ಬಸ್ಸಿಗೆ ಲಾರಿಯು ಡಿಕ್ಕಿ ಹೊಡೆದ ಪರಿಣಾಮ ಕೆಎಸ್ ಆರ್ಟಿಸಿ ಬಸ್ ಚಾಲಕನ ಕಾಲು ತುಂಡಾಗಿದೆ. ಇನ್ನು ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ.
ಇದನ್ನೂ ಓದಿ : ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ..!
ಇನ್ನು ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಲೋಕಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಇನ್ನು ವಿಷಯ ತಿಳಿಯುತ್ತದ್ದಂತೆ ಘಟನಾ ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ಕಾರಣ ಕುರಿತು ತನಿಖೆ ಕೈಗೊಂಡಿದ್ದಾರೆ.
MUST WATCH : ಬೈಕ್ಗೆ ಗುದ್ದಿದ KSRTC ಬಸ್- ಯುವತಿ ಬಚಾವ್ ಆಗಿದ್ದೇ ರೋಚಕ




