
MYSURU DASARA INAUGURATION : ವಿಶ್ವವಿಖ್ಯಾತ ಮೈಸೂರು ದಸರಾ 2025ರ ಮಹೋತ್ಸವಕ್ಕೆ ಇಂದು (ಸೋಮವಾರ) ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ಅವರು ಉದ್ಘಾಟನೆ ನೆರವೇರಿಸಿದರು. ಇದಕ್ಕೂ ಮೊದಲು ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಸನ್ಮಾನ ನೆರವೇರಿಸಲಾಯಿತು. ಬಳಿಕ ಬಾನು ಮುಷ್ತಾಕ್ ಅವರು ನಾಡದೇವಿ ಚಾಮುಂಡೇ ಶ್ವರಿಗೆ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ಸ್ವೀಕರಿಸಿದರು. ದೇವಿಯ ದರ್ಶನ ಪಡೆದು ಭಾವುಕರಾದ ಸಾಹಿತಿ, ತಮ್ಮ ಭಕ್ತಿ ಭಾವನೆ ವ್ಯಕ್ತಪಡಿಸಿದರು.
ಈ ಸಮಾರಂಭದಲ್ಲಿ ಉಸ್ತುವಾರಿ ಸಚಿವ ಎಚ್. ಸಿ. ಮಹದೇವಪ್ಪ, ಸಚಿವರುಗಳಾದ ಶಿವರಾಜ್ ತಂಗಡಗಿ, ವೆಂಕಟೇಶ್, ಶಾಸಕರಾದ ಜಿಟಿ ದೇವೇಗೌಡ, ಹರೀಶ್ ಗೌಡ, ತನ್ವೀರ್ ಸೇಟ್, ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸೇರಿದಂತೆ ಮೈಸೂರು ಜಿಲ್ಲೆಯ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.




