ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ Suicide.

ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು 17 ವರ್ಷದ ಲೇಖನಾ (Lekhana) ಎಂದು ಗುರುತಿಸಲಾಗಿದೆ.
ಇದನ್ನು ಓದಿ : ತಾಯಿ ಮಕ್ಕಳ ಆಸ್ಪತ್ರೆ ಗೋಡೆ ಬಿರುಕು- ಜೀವಭಯದಲ್ಲಿಯೇ ರೋಗಿಗಳ ನರಳಾಟ.!
ತಾಯಿಯೊಂದಿಗೆ ವಾಸವಿದ್ದ ಲೇಖನಾ
ಲೇಖನಾ ಇತ್ತೀಚೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡು ಮನೆಯಲ್ಲಿಯೇ ಇದ್ದಳು ಎನ್ನಲಾಗಿದೆ. ಪೋಷಕರ ನಡುವೆ ನಡೆದ ಮನಸ್ತಾಪದಿಂದ ತಂದೆ-ತಾಯಿ ಪ್ರತ್ಯೇಕವಾಗಿ ವಾಸಿಸುತ್ತಿದ್ದು ತಂದೆ ಬೇರೆಡೆ ವಾಸವಾಗಿದ್ದರೆ, ಲೇಖನಾ ತಾಯಿಯೊಂದಿಗೆ ವಾಸವಿದ್ದಳು ಎಂದು ತಿಳಿದುಬಂದಿದೆ.
ಅಸಹಜ ಸಾವು
ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ. ನಾನು ಒಂಟಿ ಎಂಬ ಭಾವನೆ ಕಾಡುತ್ತಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಬುಧವಾರ ರಾತ್ರಿ ನೇಣು ಬಿಗಿದುಕೊಂಡು Suicide ಮಾಡಿಕೊಂಡಿದ್ದಾಳೆ. ಸದ್ಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : ಭಯಂಕರ ಮಾಟ- ಮಂತ್ರ- ಡೋಂಗಿ ಸ್ವಾಮೀಜಿಯ ಕಥೆ ಕೇಳಿದ್ರೆ ಶಾಕ್ ಆಗ್ತೀರಾ..?| TUMAKURU NEWS




