ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಯುವಕನ ಬರ್ಬರ Murder ಆಗಿದೆ.

ಇನ್ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಅತ್ತಿಗನಾಳು ಗ್ರಾಮದ ಸಮೀಪ ಘಟನೆ
ಕೊಲೆಯಾದ ಯುವಕನನ್ನು ಮಂಜುನಾಥ್ (21) ಎಂದು ಗುರುತಿಸಲಾಗಿದೆ. ಆತ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ಅತ್ತಿಗನಾಳು ಗ್ರಾಮದ ಸಮೀಪ ಘಟನೆ Murder ನಡೆದಿದೆ.
ಬೇರೊಬ್ಬ ಮದುವೆಯಾಗಲಿರುವ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ
ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್ಸ್ಟಾಗ್ರಾಂ ಮೂಲಕ Messege ಕಳುಹಿಸುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ ಯುವಕನೊಂದಿಗೆ ನಿಶ್ಚಿತಾರ್ಥವಾಗಿದ್ದು, ಈ ವಿಷಯವನ್ನು ತಿಳಿಸಿ ಮೆಸೇಜ್ ಮಾಡದಂತೆ ಮಂಜುನಾಥ್ಗೆ ತಿಳಿಸಿದ್ದಳು ಎನ್ನಲಾಗಿದೆ. ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ. ಇದನ್ನು ಯುವತಿ ತನ್ನನ್ನು ಮದುವೆಯಾಗಲಿರುವ ಯುವಕ ವೇಣುಗೆ ತಿಳಿಸಿದ್ದಾಳೆ.
ಇದನ್ನು ಓದಿ : ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ
ಚಾಕುವಿನಿಂದ ಇರಿದು Murder
ಈ ಹಿನ್ನೆಲೆ ಮಾತನಾಡಬೇಕು ಎಂದು ಮಂಜುನಾಥ್ನನ್ನು ಕರೆಸಿಕೊಂಡ ವೇಣು ಆತನ ಮೇಲೆ ಸ್ನೇಹಿತರಾದ ಕಿರಣ್, ಅಪ್ಪು ಮತ್ತು ಮಂಜು ಜೊತೆ ಜಗಳವಾಡಿದ್ದಾನೆ. ಗಲಾಟೆ ವೇಳೆ ಮಂಜುನಾಥ್ಗೆ ಚಾಕುವಿನಿಂದ ಇರಿದು ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಮಂಜುನಾಥ್ನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆ.
ಪ್ರಕರಣ ದಾಖಲು
ಇನ್ನು ಈ ಘಟನೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : ಪೊಲೀಸರ ಮುಂದೆ ಬೈಕ್ಗೆ ಬೆಂಕಿ ಹಚ್ಚಿ, ಪರಾರಿಯಾದ ಯುವಕ




