ತುಮಕೂರಿನಲ್ಲಿ ಭೀಕರ Accident ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಭೀಕರ ರಸ್ತೆ ಅಪಘಾತ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನ ಬುಗುಡನಹಳ್ಳಿ ಸಮೀಪ ನೆನ್ನೆ ರಾತ್ರಿ ನಡೆದಿದೆ. ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ Accident ಸಂಭವಿಸಿದ್ದು, ಬೈಕ್ ಸವಾರ ಲೋಕೇಶ್ (21) ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮನೆಯಿಂದ ಹೊರಟ ಕೆಲವೇ ನಿಮಿಷಗಳಲ್ಲಿ Accident
ಮೃತ ಲೋಕೇಶ್ ಬುಗುಡನಹಳ್ಳಿ ನಿವಾಸಿಯಾಗಿದ್ದು, ತನ್ನ ಮನೆಯಿಂದ ತುಮಕೂರು ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ವಲ್ಪ ಹೊರಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೊರಟಿದ್ದ ಲೋಕೇಶ್, ಮನೆಯಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಅಪಘಾತ ಸಂಭವಿಸಿದೆ.
ಇದನ್ನು ಓದಿ : ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ-ಯುವಕನ ಕೊಲೆ

ತಲೆಗೆ ಗಂಭೀರ ಗಾಯ
ಇನ್ನು ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡಿದ್ದರಿಂದ ಲೋಕೇಶ್ ತಲೆಗೆ ಗಂಭೀರ ಗಾಯವಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತದ ಸುದ್ದಿ ತಿಳಿದ ಕೂಡಲೇ ಬೆಳ್ಳಾವಿ ಪೊಲೀಸ್ ಠಾಣೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲು
ಘಟನೆ ಸಂಬಂಧ ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನು ನೋಡಿ : ಅರ್ಧಕ್ಕೆ ನಿಂತ ಯುಜಿಡಿ ಕಾಮಗಾರಿ ಜನರ ಗೋಳು ಕೇಳೋರು ಯಾರು




