Raichur : ಕೈಕಾಲು ತೊಳೆಯಲು ಹೋಗಿ ಕಾಲುವೆಯಲ್ಲಿ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆನೆ ಹೊಸೂರು ಸಮೀಪ ನಡೆದಿದೆ.

Raichur : ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಮತ್ತು ದೇವಮ್ಮ (30) ಮೃತ ಮಹಿಳೆಯರು. ಇಬ್ಬರೂ ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಗದ್ದೆಯಲ್ಲಿ ಭತ್ತ ನೆಡುವ ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವ ವೇಳೆ, ಕೈಕಾಲು ತೊಳೆಯಲು ಕಾಲುವೆ ಬಳಿ ತೆರಳಿದ್ದರು. ಈ ವೇಳೆ ಅಚಾನಕ್ ಕಾಲು ಜಾರಿ ಇಬ್ಬರೂ ಕಾಲುವೆಗೆ ಬಿದ್ದು ನೀರು ಪಾಲಾಗಿದ್ದಾರೆ.
ಇದನ್ನು ಓದಿ : ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ
ರಕ್ಷಣಾ ಕಾರ್ಯಾಚರಣೆ
ಘಟನೆಯ ಮಾಹಿತಿ ಪಡೆದ ಲಿಂಗಸುಗೂರು ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸಿದರು. ಬಳಿಕ ಇಬ್ಬರ ಮೃತದೇಹಗಳನ್ನು ಹೊರತೆಗೆದು ಲಿಂಗಸುಗೂರು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : ಪೊಲೀಸರ ಮುಂದೆ ಬೈಕ್ಗೆ ಬೆಂಕಿ ಹಚ್ಚಿ, ಪರಾರಿಯಾದ ಯುವಕ




