New Year ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುತ್ತಿದ್ದ ಕುಟುಂಬಕ್ಕೆ ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ

New Year ಹಿನ್ನೆಲೆಯಲ್ಲಿ ನೆಲಮಂಗಲ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಲಕ್ಕೇನಹಳ್ಳಿ ಬಳಿ, ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಓವರ್ ಸ್ಪೀಡ್ನಲ್ಲಿದ್ದ ಇಕೋ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ಮೃತರ ವಿವರ
ತೊರೆ ಮೂಡಲಪಾಳ್ಯ ನಿವಾಸಿಗಳಾದ ಅಶ್ವಿನಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದು ಅಪಾರ ರಕ್ತಸ್ರಾವವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅಶ್ವಿನಿ ಅಸುನೀಗಿದ್ದಾರೆ.
ಇದನ್ನು ಓದಿ : ಕೌಟುಂಬಿಕ ಕಲಹ – ಪತಿಯಿಂದ ಪತ್ನಿಯ ಹತ್ಯೆ

ಕುಟುಂಬದ ಹಿನ್ನೆಲೆ
ಅಶ್ವಿನಿ ಮತ್ತು ರಮೇಶ್ ದಂಪತಿ ಕಳೆದ 8 ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಎರಡನೇ ಮಗನನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಪೂಜೆ ಮುಗಿಸಿ ಬೈಕ್ನಲ್ಲಿ ಮನೆಗೆ ವಾಪಸ್ ಆಗುತ್ತಿದ್ದರು.
ಅಪಘಾತದ ವೇಳೆ ರಮೇಶ್ ಮತ್ತು ಮಗ ಯವನ್ ಅದೃಷ್ಟವಶಾತ್ ಪಾರಾಗಿದ್ದಾರೆ. ಆದರೆ ಅಶ್ವಿನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಜೀವ ಉಳಿಸಲಾಗಲಿಲ್ಲ.
ಪೊಲೀಸ್ ತನಿಖೆ
ಘಟನೆಯ ಕುರಿತು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕರ ವಿರುದ್ಧ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : SERVICE ROADಗಳೇ ಲಾರಿಗಳ PARKING – ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ




