Janardhana Reddy ಮನೆ ಮುಂದೆ ನಡೆದ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ನ ಕಾರ್ಯಕರ್ತ ಬಲಿಯಾಗಿದ್ದಾನೆ.

ಬಳ್ಳಾರಿ ನಗರದಲ್ಲಿ BJP ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ನಡೆದ Firing ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ.
ಕೈ ಕಾರ್ಯಕರ್ತ ಬಲಿ!
ಇನ್ನು ಘಟನೆ ಬಳಿಕ ರಾಜಶೇಖರ್ ಮೃತದೇಹವನ್ನು ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ನ್ಯಾಯ ವೈದ್ಯಶಾಸ್ತ್ರ ವಿಭಾಗದ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಆಸ್ಪತ್ರೆ ಆವರಣದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಶವಾಗಾರದ ಎದುರು ಮೃತನ ಕುಟುಂಬಸ್ಥರು ಮತ್ತು ಕಾರ್ಯಕರ್ತರು ಜಮಾಯಿಸಿದ್ದಾರೆ.
ಇದನ್ನು ಓದಿ : Dina Bhavishya|ದಿನ ಭವಿಷ್ಯ 2 ಜನವರಿ 2026

ಪೊಲೀಸ್ ಬಿಗಿ ಬಂದೋಬಸ್ತ್
ಘಟನೆಯ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.
11 ಜನರ ವಿರುದ್ಧ FIR
ಬ್ಯಾನರ್ ಅಳವಡಿಕೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ FIR ದಾಖಲಿಸಲಾಗಿದೆ. Janardhana Reddy, ಶ್ರೀರಾಮುಲು, ಸೋಮಶೇಖರ್ ರೆಡ್ಡಿ, ದಮ್ಮೂರು ಶೇಖರ್ ಸೇರಿದಂತೆ ಒಟ್ಟು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಗುಂಡು ಹಾರಿಸಿದ್ದಾರೆ
ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಅವರ ಬೆಂಬಲಿಗರು ಪರಸ್ಪರ ಕಲ್ಲು ತೂರಾಟ ನಡೆಸಿದರೆ ಎನ್ನಲಾಗಿದೆ. ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದಂತೆ ಸತೀಶ್ ರೆಡ್ಡಿ ಅವರ ಖಾಸಗಿ ಗನ್ಮ್ಯಾನ್ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾಗಿ ತಿಳಿದುಬಂದಿದೆ. ಆದರೆ ಈ ಗಲಾಟೆಯಲ್ಲೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನು ನೋಡಿ : ಬರ್ತಡೇಗೆ ವಿಶ್ ಮಾಡಿದ್ದಕ್ಕೆ ಹಳೆ ಲವರ್ನನ್ನೇ ಕೊಂದ ಬಾವಿ ಪತಿ




