Sira ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹೊತ್ತಿ ಉರಿದ ಕಾರು.

ಹೊಸ ವರ್ಷದ ದಿನವೇ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಹೊತ್ತಿ ಉರಿದಿರುವ ಘಟನೆ Sira ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಚಿಕ್ಕನಹಳ್ಳಿ ಸಮೀಪ ನಿನ್ನೆ ರಾತ್ರಿ ಸುಮಾರು 10.20ರ ವೇಳೆಗೆ ನಡೆದಿದೆ.
ಇದನ್ನು ಓದಿ : BBK S12 : ಕೊನೆಯ ಕ್ಯಾಪ್ಟನ್ಸಿ ಆಟದಲ್ಲಿ ಮೋಸ ಮಾಡಿದ್ರಾ ಧನುಷ್..?
ಶಿರಾ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ
ಶಿರಾ ನಗರದ ಅಬ್ದುಲ್ ರೆಹಮಾನ್ ಬಿನ್ ಮೊಹಮ್ಮದ್ ಅಯ್ಯುಬ್ ಅವರ ಮಾಲೀಕತ್ವದ ಕಾರು ತುಮಕೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಸದ್ಯ ಕಳ್ಳಂಬೆಳ್ಳಾ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಇದನ್ನು ನೋಡಿ : ಮಕ್ಕಳಲ್ಲಿ ಅತಿಯಾದ ಮೊಬೈಲ್ ಚಟ.. ‘ಟೆಕ್ಸ್ಟ್ ನೆಕ್’ ಸಮಸ್ಯೆಗೆ ದಾರಿ.. ಪೋಷಕರೇ ಎಚ್ಚರ!




