New Year ಮೊದಲ ದಿನವೇ ಬುಲೆರೋ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

New Year : ಈ ಘಟನೆ ಅರಸೀಕೆರೆ ತಾಲೂಕಿನ ಬಾಣವಾರ ಸಮೀಪದ ಚಿಕ್ಕರಹಳ್ಳಿ ಗೋಶಾಲೆ ಬಳಿಯ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟವರನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಳಿ ಗ್ರಾಮದ ಶಂಭೀರ್, ತಿಮ್ಮಣ್ಣ ಮತ್ತು ಸಂಜಯ್ ಎಂದು ಗುರುತಿಸಲಾಗಿದೆ.
ಇದನ್ನು ಓದಿ : ಹೊಸ ವರ್ಷದ ದಿನವೇ ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು

ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ವೇಳೆ ಬುಲೆರೋ ಪಿಕಪ್ ವಾಹನದ ಟೈರ್ ಏಕಾಏಕಿ ಬ್ಲಾಸ್ಟ್ ಆಗಿ ವಾಹನ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಬುಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೌಶಾದ್ ಎಂಬುವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಬಾಣವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಇದನ್ನು ನೋಡಿ : ಫ್ಲಾಫ್ಗಳ ಸರದಾರ ವಿಜಯ್ ದೇವರಕೊಂಡ, ಸಿನಿಮಾಕ್ಕೆ ಬ್ರೇಕ್ ಹಾಕಿದ ನಿರ್ಮಾಪಕ




