ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ Devanahalli Toll ಪ್ಲಾಜಾ ಬಳಿ ಸ್ಲೀಪರ್ ಕೋಚ್ ಬಸ್ ಟೋಲ್ ಬೂತ್ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಅಪಘಾತ ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Devanahalli Toll : ಹೈದರಾಬಾದ್ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್, ದೇವನಹಳ್ಳಿ ಟೋಲ್ ಪ್ಲಾಜಾ ಬಳಿ ನಿಯಂತ್ರಣ ತಪ್ಪಿ ಟೋಲ್ ಬೂತ್ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬಸ್ನ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದೆ.
ಗಾಯಗಳು ಮತ್ತು ಪ್ರಯಾಣಿಕರ ಸುರಕ್ಷತೆ
ಅದೃಷ್ಟವಶಾತ್, ಬಸ್ನಲ್ಲಿದ್ದ ಯಾವುದೇ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿಲ್ಲ. ಆದರೆ ಚಾಲಕ ಹಾಗೂ ಸಹ ಚಾಲಕರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿ : ಗೃಹ ಪ್ರವೇಶದಲ್ಲಿ ವಿಶೇಷ ವ್ಯಕ್ತಿಯ ಫೋಟೋ ಇಟ್ಟು ಪೂಜೆ ಮಾಡಿದ Tarun-Sonal
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಟೋಲ್ ಬೂತ್ಗೆ ಡಿಕ್ಕಿಯಾದ ನಂತರ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಹಿಂಬದಿಗೆ ಚಲಿಸಿದೆ. ಈ ವೇಳೆ ಕೆಲ ಪ್ರಯಾಣಿಕರು ಬಸ್ನಿಂದ ಜಿಗಿದು, ಬಸ್ ತಡೆಯಲು ಪ್ರಯತ್ನಿಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ನಂತರ ಬಸ್ ಮತ್ತೆ ಟೋಲ್ ಬೂತ್ಗೆ ಡಿಕ್ಕಿಯಾಗಿ ನಿಂತಿದೆ. ಡಿಕ್ಕಿಯ ಬಳಿಕ ಬಸ್ನ ಮುಂಭಾಗದಿಂದ ಹೊಗೆ ಆವರಿಸಿರುವುದು ಕೂಡ ದೃಶ್ಯದಲ್ಲಿ ಕಾಣಿಸಿದೆ.
ಈ ಸಂಬಂಧ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕಾರಣಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.
ಇದನ್ನು ನೋಡಿ : ಯಾರ ಮೇಲೂ ಗೂಬೆ ಕೂರಿಸಬಾರದು ಹೀಗ್ಯಾಕಂದ್ರು ಮಾಜಿ ಸಚಿವ ರಾಜಣ್ಣ..?




