ಆದಿಚುಂಚನಗಿರಿಗೆ ಪ್ರಧಾನಿ Modi ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ.

ಆದಿಚುಂಚನಗಿರಿಗೆ ಪ್ರಧಾನ ಮತ್ರಿ ನರೇಂದ್ರ ಮೋದಿ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. Modi ಅವರು ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.
ಸ್ವಾಮೀಜಿಗಳ ಗದ್ದುಗೆ ಉದ್ಘಾಟನೆ
ಈ ಸಂದರ್ಭದಲ್ಲಿ ಅವರು ಪರಮಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ನಿರ್ಮಲಾನಂದನಾಥ ಸ್ವಾಮೀಜಿಗಳ ವಾರ್ಷಿಕ ಪಟ್ಟಾಭಿಷೇಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಇದನ್ನು ಓದಿ : ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಪ್ರಕಟಿಸಿದ ಆಸೀಸ್ ಬ್ಯಾಟರ್
ಭಾಷಣ ಮಾಡುವ ಸಾಧ್ಯತೆ
ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ-ಸಾಂಸ್ಕೃತಿಕ ವಿಚಾರಗಳ ಕುರಿತು Modi ಅವರು ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಅವರ ಪ್ರವಾಸಕ್ಕೆ ಸಂಬಂಧಿಸಿದಂತೆ ಅಧಿಕೃತ ಘೋಷಣೆಯನ್ನು ಚುಂಚನಗಿರಿ ಮಠದ ವತಿಯಿಂದ ಶೀಘ್ರದಲ್ಲೇ ಮಾಡಲಾಗುವುದು ಎಂದು ತಿಳಿದುಬಂದಿದೆ.
ಇನ್ನು ಮೋದಿ ಅವರ ಭೇಟಿಯಿಂದಾಗಿ ಜಿಲ್ಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಕಠಿಣಗೊಳಿಸುವ ಸಾಧ್ಯತೆ ಇದ್ದು, ಸಿದ್ಧತೆಗಳು ಆರಂಭವಾಗಿವೆ.
ಇದನ್ನು ನೋಡಿ : ಹೊಸ ವರ್ಷದಂದು ಕಂಠಪೂರ್ತಿ ಕಡಿದು ಕಾರು ಚಾಲನೆ: ಜನರ ಮೇಲೆ ಕಾರು ಹತ್ತಿಸಿದ ಭೂಪ, ನಾಲ್ವರಿಗೆ ಗಾಯ




