Tirupati ದೇಗುಲದಲ್ಲಿ ಭಾರಿ ಭದ್ರತಾ ಲೋಪ.

Tirupati ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ನೆನ್ನೆ ರಾತ್ರಿ ಗಂಭೀರ ಭದ್ರತಾ ಲೋಪದ ಘಟನೆ ನಡೆದಿದೆ. ಕುಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ದೇಗುಲದ ಕಂಪೌಂಡ್ ಹಾರಿ ಒಳನುಗ್ಗಿ, ಗೋಪುರ ಏರಿ ಅವಾಂತರ ಸೃಷ್ಟಿಸಿದ್ದಾನೆ.
ಸಿಬ್ಬಂದಿ ಮತ್ತು ಭಕ್ತರಲ್ಲಿ ಭಯ
ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಬಳಿಕ ಈ ಘಟನೆ ನಡೆದಿದ್ದು, ಆಗಂತುಕನೊಬ್ಬ ಏಕಾಏಕಿ ಗೋಪುರದ ಮೇಲೇರಿದನು. ನಂತರ ಗೋಪುರದ ಮೇಲಿದ್ದ ಕಳಶಗಳನ್ನು ಎಳೆಯಲು ಯತ್ನಿಸಿದ್ದಾನೆ. ಇದರಿಂದ ದೇಗುಲದ ಸಿಬ್ಬಂದಿ ಹಾಗೂ ಅಲ್ಲಿದ್ದ ಭಕ್ತರಲ್ಲಿ ಭಯ ಮತ್ತು ಆತಂಕ ಮೂಡಿತು.

ಇದನ್ನು ಓದಿ : Dina Bhavishya|ದಿನ ಭವಿಷ್ಯ 3 ಜನವರಿ 2026
ಆರೋಪಿಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ
ಇನ್ನು ತಕ್ಷಣ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸುಮಾರು ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರು. ಅಂತಿಮವಾಗಿ ಆರೋಪಿಯನ್ನು ಗೋಪುರದಿಂದ ಸುರಕ್ಷಿತವಾಗಿ ಕೆಳಗೆ ಇಳಿಸಿ ವಶಕ್ಕೆ ಪಡೆಯಲಾಯಿತು.
ಘಟನೆ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ
ಆರೋಪಿಯನ್ನು ನಿಜಾಮಾಬಾದ್ ಜಿಲ್ಲೆಯ ಕೂರ್ಮಾವಾಡಾ ಪೆದ್ದ ಮಲ್ಲ ರೆಡ್ಡಿ ಕಾಲೋನಿಯ ನಿವಾಸಿ ತಿರುಪತಿ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವರವಾದ ತನಿಖೆ ಆರಂಭಿಸಿದ್ದು, ತನಿಖೆ ಪೂರ್ಣಗೊಂಡ ನಂತರ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು ಎಂದು ಪೂರ್ವ ಡಿಎಸ್ಪಿ ಭಕ್ತವತ್ಸಲಂ ತಿಳಿಸಿದ್ದಾರೆ.

ಈ ಘಟನೆ ತಿರುಪತಿ ದೇಗುಲದ ಭದ್ರತಾ ವ್ಯವಸ್ಥೆಯ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.
ಇದನ್ನು ನೋಡಿ : CIGARETTE ಸೇದೊರಿಗೆ ಕೇಂದ್ರ BIG SHOCK – ರೇಟ್ ಕೇಳಿದ್ರೆ ಶಾಕ್ ಆಗ್ತೀರಾ..?




