Karnataka Weather Report : ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಬೆಳಗ್ಗೆ ದಟ್ಟ ಮಂಜು, ತೀವ್ರ ಚಳಿ ಮತ್ತು ಮೋಡ ಕವಿದ ವಾತಾವರಣ ಕಂಡುಬಂದಿದೆ.

Karnataka Weather Report : ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಈಗಾಗಲೇ ಕಳೆದ ಎರಡು ದಿನಗಳ ಹಿಂದೆ ಅಂದರೆ ಹೊಸ ವರ್ಷದ ಆರಂಭದಲ್ಲಿ ನಗರದ ಹಲವೆಡೆ ತಂತುರು ಮಳೆಯಾದ ಬಗ್ಗೆ ವರದಿಯಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಮುಂದುವರಿದಿದ್ದು, ರಾತ್ರಿ ತಾಪಮಾನ ಕುಸಿತ ಹಾಗೂ ಹಗಲು ಬಿಸಿಲು ಕಾಣಿಸುತ್ತಿದೆ.
ಈ ನಡುವೆ ಜನವರಿ 3ರಂದು ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಲ್ಲಿ ಚಳಿ, ಎಲ್ಲಿ ಮಳೆ ಎನ್ನುವ ವಿವರಗಳು ಹೀಗಿವೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ದಟ್ಟ ಮಂಜು, ಚಳಿ ಹಾಗೂ ಮೋಡ ಕವಿದ ವಾತಾವರಣ ಕಂಡುಬಂದಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆಯಿದ್ದು,
ಈಗಾಗಲೇ ಹೊಸ ವರ್ಷದ ಆರಂಭದಲ್ಲಿ ಕಳೆದ ಎರಡು ದಿನಗಳಲ್ಲಿ ನಗರದ ಹಲವೆಡೆ ತುಂತುರು ಮಳೆಯಾಗಿದೆ ಎಂದು ವರದಿಯಾಗಿದೆ.

ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. .
ಮುಂದಿನ 2–3 ದಿನಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ತಾಪಮಾನ ಕುಸಿತವಾಗಬಹುದು, ಚಳಿ ಹೆಚ್ಚುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯ ಸಾಧ್ಯತೆ ಇದೆ. ಉಳಿದಂತೆ, ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚಳಿ ಜೊತೆಗೆ ಒಣಹವೆ ಮುಂದುವರೆಯಲಿದೆ, ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದೆ.

ಈಗಾಗಲೇ ಭಾರೀ ಚಳಿಯಿಂದ ಈ ಭಾಗಗಳ ಜನರು ತತ್ತರಿಸಿ ಹೋಗಿದ್ದಾರೆ. ಇಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ಬೀದರ್ ಮತ್ತು ಬಾಗಲಕೋಟೆಗಳಲ್ಲಿ ಹೆಚ್ಚು ಚಳಿ ಇರಲಿದೆ.
ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಭಾಗಗಳಲ್ಲಿ ಚಳಿ ಕಡಿಮೆ ಇರುವುದಾಗಿದ್ದು, ಮುಂದಿನ 3 ದಿನಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಕೊಡಗು, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಜೊತೆಗೆ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಗದಗ, ಕಲಬುರಗಿ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರಿನಲ್ಲಿ ಭಾರೀ ಚಳಿ ಮುಂದುವರೆಯಲಿದೆ.
ಮುಂದಿನ ದಿನಗಳಲ್ಲಿ ಈ ಭಾಗಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ತಿಳಿಸಿದೆ.

ಈಗಾಗಲೇ ಭಾರೀ ಚಳಿಯಿಂದಾಗಿ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ 9 ಗಂಟೆಯಾದರೂ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅದರಲ್ಲೂ ಬೀದರ್, ಕಲಬುರಗಿ, ರಾಯಚೂರು, ಧಾರವಾಡ ಜಿಲ್ಲೆಗಳಲ್ಲೇ ಹೆಚ್ಚು ಚಳಿ ಮುಂದುವರೆದಿದೆ.
ಜನವರಿ ತಿಂಗಳಾಂತ್ಯದಲ್ಲಿ ಚಳಿ ಪ್ರಮಾಣ ಕಡಿಮೆಯಾಗಲಿದ್ದು, ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ




