ಆಕ್ಸಿಡೆಂಟ್ನಲ್ಲಿ ಮೃತರಾದ IAS ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ನೌಕರಿ.

ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕದ ಹಿರಿಯ IAS ಅಧಿಕಾರಿ Mahantesh Bilagi ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಯಾವ ಹುದ್ದೆ ನೀಡಲು ಸಂಪುಟ ಅನುಮೋದನೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ (Chaitanya) ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್–ಸಿ ಹುದ್ದೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದನ್ನು ಓದಿ : ತಿರುಪತಿ ಗೋವಿಂದರಾಜ ಸ್ವಾಮಿ ದೇಗುಲದಲ್ಲಿ ಕುಡುಕನಿಂದ ಅವಾಂತರ
ಪ್ರಾಮಾಣಿಕ ಅಧಿಕಾರಿ
ಜನಸ್ನೇಹಿ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಮಹಾಂತೇಶ್ ಬೀಳಗಿ ಅವರು ಇತ್ತೀಚೆಗೆ ಕಲಬುರಗಿ ಸಮೀಪ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು.
ಚಿಕಿತ್ಸೆ ಫಲಿಸದೇ ಸಾವು!
2025ರ ನವೆಂಬರ್ 25ರಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಸಮೀಪ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.

ಪ್ರಕರಣ ದಾಖಲು
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಚಾಲಕ ಆರೋಕಿಯಾ ಆಂಥೋನಿ ರಾಜ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನು ನೋಡಿ : SIRA | ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ- ಬೈಕ್ ಸವಾರರ ಜೊತೆ ಕುರಿ ದುರ್ಮರಣ




