ಬೆಂಗಳೂರಿನಲ್ಲಿ ಇನ್ಸ್ಟಾಗ್ರಾಂ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ Online Fraud ಪ್ರಕರಣಗಳು ಹೆಚ್ಚುತ್ತಿವೆ.

Social Media ಗಳಲ್ಲಿ ಪ್ರಕಟವಾಗುವ ಆಕರ್ಷಕ ಜಾಹೀರಾತುಗಳನ್ನು ನಂಬಿ ಜನರು Online Fraud ಗೆ ಒಳಗಾಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಬೆಂಗಳೂರಿನಲ್ಲಿ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿವೆ.
ವಶೀಕರಣ ಮಾಡಿಸುವ ನೆಪದಲ್ಲಿ ₹2.05 ಲಕ್ಷ ವಂಚನೆ
ಆನ್ಲೈನ್ನಲ್ಲಿ ಪ್ರಕಟವಾದ ವಶೀಕರಣ ಜಾಹೀರಾತನ್ನು ನಂಬಿದ ಯುವತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. “ಪ್ರೀತಿ ಸಮಸ್ಯೆಗೆ ಪರಿಹಾರ, ಕಷ್ಟಕ್ಕೆ ಪರಿಹಾರ ನೀಡುತ್ತೇವೆ” ಎಂಬ ಘೋಷಣೆಯೊಂದಿಗೆ ಕೃಷ್ಣಮೂರ್ತಿ ಗುರೂಜಿ ಎಂಬ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಜಾಹೀರಾತು ನೀಡಲಾಗಿತ್ತು.
ಇದನ್ನು ಓದಿ : Dina Bhavishya|ದಿನ ಭವಿಷ್ಯ 4 ಜನವರಿ 2026

ಆನ್ಲೈನ್ ಮೂಲಕ ₹2.05 ಲಕ್ಷ ಹಣ ವಂಚನೆ
ಜಾಹೀರಾತಿನಲ್ಲಿ ನೀಡಿದ್ದ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ ಯುವತಿಯೊಂದಿಗೆ ಚಂದ್ರಶೇಖರ್ ಸುಗತ್ ಗುರೂಜಿ ಎಂದು ಪರಿಚಯಿಸಿಕೊಂಡ ವ್ಯಕ್ತಿ ಮಾತನಾಡಿದ್ದಾನೆ. ಪ್ರೀತಿಸಿದ ಯುವಕನ ವಿವರ ಪಡೆದು, ಮದುವೆ ಖಚಿತವಾಗುತ್ತದೆ ಆದರೆ ಪೂಜಾ–ವಿಧಿಗಳಿಗೆ ಖರ್ಚಾಗುತ್ತದೆ ಎಂದು ನಂಬಿಸಿ ಹಂತ ಹಂತವಾಗಿ ಆನ್ಲೈನ್ ಮೂಲಕ ಒಟ್ಟು ₹2.05 ಲಕ್ಷ ಹಣ ಪಡೆದುಕೊಂಡಿದ್ದಾನೆ.
ಏನು ಮಾಡ್ತಿಯೋ ಮಾಡಿಕೋ
ನಂತರ ಮತ್ತೆ 4 ಲಕ್ಷ ಕೇಳಿದಾಗ ಅನುಮಾನಗೊಂಡ ಯುವತಿ ಹಣ ವಾಪಸ್ ಕೇಳಿದರೆ, ಏನು ಮಾಡ್ತಿಯೋ ಮಾಡಿಕೋ ಎಂದು ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ಬಗ್ಗೆ ಯುವತಿ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನು ನೋಡಿ : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಹದಿಹರೆಯದ ಬಾಲಕರು




