Hubballi : 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಹದಿಹರೆಯದ ಬಾಲಕರು.

13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 14 ರಿಂದ 15 ವರ್ಷದೊಳಗಿನ ಮೂವರು ಬಾಲಕರು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ Hubballi ಯಲ್ಲಿ ನಡೆದಿದೆ. ಬಾಲಕಿಯ ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ, ಅದೇ ಪ್ರದೇಶದಲ್ಲಿ ವಾಸಿಸುವ ಬಾಲಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಆರೋಪಿಗಳು ವಶಕ್ಕೆ
ಈ ಕುರಿತು ಮಾತನಾಡಿದ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಸಂತ್ರಸ್ತ ಬಾಲಕಿಗೆ ಅಗತ್ಯ ರಕ್ಷಣೆ ಮತ್ತು ನೆರವು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಅವರಲ್ಲಿ ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬ ಬಾಲಕ ಶಾಲೆ ಬಿಟ್ಟಿರುವ ಶಂಕೆ ಇದೆ ಎಂದು ಅವರು ಹೇಳಿದರು.

ಇದನ್ನು ಓದಿ : ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ!
ಅತ್ಯಾಚಾರದ ವಿಡಿಯೊ ನಮ್ಮ ಬಳಿ ಎಂದು ಬೆದರಿಕೆ
ಅತ್ಯಾಚಾರದ ವಿಡಿಯೊ ನಮ್ಮ ಬಳಿ ಇದೆ ಎಂದು ಹೇಳಿ ಆರೋಪಿಗಳು ಬಾಲಕಿಯನ್ನು ಬೆದರಿಸಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ದೂರು ನೀಡಿದ್ದಾರೆ. ಈ ಹಿನ್ನೆಲೆ ಆರೋಪಿಗಳ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರು ದಾಖಲು
ಇನ್ನು ಪ್ರಕರಣದ ಕುರಿತು ಸಂಬಂಧಿತ ಕಾನೂನುಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದು ವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ನೋಡಿ : ಯಶ್ ತಾಯಿ ಪುಷ್ಪಾ ವಿರುದ್ಧ ಒತ್ತುವರಿ ಆರೋಪ; ಕೋರ್ಟ್ ಆದೇಶದಂತೆ ಘರ್ಜಿಸಿದ ಜೆಸಿಬಿ..!




