Ballari ಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಮೃತಪಟ್ಟಿದ್ದರು.

Ballari : ಈ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮೃತ ಕಾರ್ಯಕರ್ತನ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ನಗರದಲ್ಲಿ ನಡೆದ ಬ್ಯಾನರ್ ವಿವಾದದ ವೇಳೆ ಉಂಟಾದ ಗಲಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
MUST READ : Ballari : ಸತೀಶ್ ರೆಡ್ಡಿ ಖಾಸಗಿ ಗನ್ಮ್ಯಾನ್ಗಳು ನಾಪತ್ತೆ ..!!

ಕುಟುಂಬಕ್ಕೆ ₹25 ಲಕ್ಷ ಆರ್ಥಿಕ ನೆರವು
ಶನಿವಾರ ರಾಜಶೇಖರ್ ನಿವಾಸಕ್ಕೆ ತೆರಳಿದ ಸಚಿವ ಜಮೀರ್ ಅಹ್ಮದ್ ಖಾನ್,ಕುಟುಂಬಸ್ಥರಿಗೆ ಸಾಂತ್ವನ ಹೇಳಿ ₹25 ಲಕ್ಷ ರೂ. ವೈಯಕ್ತಿಕ ಆರ್ಥಿಕ ನೆರವು ನೀಡಿದರು.
ಈ ವೇಳೆ ಮಾತನಾಡಿದ ಅವರು,
“ರಾಜಶೇಖರ್ ಅವರು ಇಡೀ ಮನೆಯ ಆಧಾರ ಸ್ತಂಭವಾಗಿದ್ದರು. ಅವರ ಅಕಾಲಿಕ ಮರಣದಿಂದ ಕುಟುಂಬ ಸಂಕಷ್ಟದಲ್ಲಿದೆ. ಹೀಗಾಗಿ ನಾನು ವೈಯಕ್ತಿಕವಾಗಿ ಈ ನೆರವು ನೀಡಿದ್ದೇನೆ. ಮುಂದೆಯೂ ಕುಟುಂಬದ ಜೊತೆ ನಿಲ್ಲುತ್ತೇನೆ” ಎಂದು ಹೇಳಿದರು.

ಸರ್ಕಾರದಿಂದ ಮನೆ ನೀಡುವ ಭರವಸೆ
ಈ ಸಂದರ್ಭದಲ್ಲಿ ಮೃತ ಕಾರ್ಯಕರ್ತನ ತಾಯಿ ತುಳಸಿ ಅವರು,ಸರ್ಕಾರದ ಮೂಲಕ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.ಇದಕ್ಕೆ ಸ್ಪಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್,ಸರ್ಕಾರದಿಂದ ಮನೆ ಕಟ್ಟಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಇದನ್ನು ನೋಡಿ : ಗ್ರಾಹಕರಿಗೆ ಭರ್ಜರಿ ಗುಡ್ನ್ಯೂಸ್; BSNL ಬಳಕೆದಾರರಿಗೆ ಸೂಪರ್ ನ್ಯೂಸ್..!




