ಬಾಂಗ್ಲಾದೇಶ್ ಸರ್ಕಾರ IPL ಬ್ಯಾನ್ ಮಾಡಲು ಮುಂದಾಗುತ್ತಿದೆ.

ಬಾಂಗ್ಲಾದೇಶ್ ಕ್ರಿಕೆಟ್ ತಂಡದ ವೇಗದ ಬೌಲರ್ ಮುಸ್ತಫಿಝುರ್ ರೆಹಮಾನ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಕೈಬಿಟ್ಟ ಬೆನ್ನಲ್ಲೇ ಬಾಂಗ್ಲಾದೇಶ್ ಸರ್ಕಾರ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದೆ. ಈ ನಿರ್ಧಾರಕ್ಕೆ ಪ್ರತಿಯಾಗಿ ಬಾಂಗ್ಲಾ ದೇಶ್ನಲ್ಲಿ IPL ಪಂದ್ಯಗಳ ಪ್ರಸಾರಕ್ಕೆ ನಿಷೇಧ ಹೇರಲು ಸರ್ಕಾರ ಮುಂದಾಗಿರುವ ಸೂಚನೆಗಳು ದೊರಕಿವೆ.
ಆಟಗಾರನಿಗೆ ನಡೆದ ಅವಮಾನಕ್ಕೆ ಪ್ರತೀಕಾರ
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವ ಆಸಿಫ್ ನಜ್ರುಲ್, ಬಾಂಗ್ಲಾದೇಶ್ ಆಟಗಾರನಿಗೆ ನಡೆದ ಅವಮಾನಕ್ಕೆ ಪ್ರತೀಕಾರವಾಗಿ ದೇಶದಲ್ಲಿ ಐಪಿಎಲ್ ಪಂದ್ಯಗಳ ಪ್ರಸಾರವನ್ನು ನಿಲ್ಲಿಸುವಂತೆ ಮಾಹಿತಿ ಮತ್ತು ಪ್ರಸಾರ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನು ಓದಿ : Yash ತಾಯಿ ಪುಷ್ಪಗೆ ಬಿಗ್ ಶಾಕ್ ನೀಡಿದ ಕೋರ್ಟ್!
IPL ಲೈವ್ ಪ್ರಸಾರಕ್ಕೆ ನಿಷೇಧ
“ಯಾವುದೇ ಸಂದರ್ಭದಲ್ಲೂ ಬಾಂಗ್ಲಾದೇಶ್, ಬಾಂಗ್ಲಾದೇಶ್ ಕ್ರಿಕೆಟ್ ಅಥವಾ ನಮ್ಮ ಕ್ರಿಕೆಟಿಗರ ಅವಮಾನವನ್ನು ನಾವು ಸಹಿಸುವುದಿಲ್ಲ. ಗುಲಾಮಗಿರಿಯ ದಿನಗಳು ಮುಗಿದಿವೆ,” ಎಂದು ಆಸಿಫ್ ನಜ್ರುಲ್ ಕಿಡಿಕಾರಿದ್ದಾರೆ. ಇದೇ ಕಾರಣಕ್ಕಾಗಿ ಐಪಿಎಲ್ ಲೈವ್ ಪ್ರಸಾರಕ್ಕೆ ನಿಷೇಧ ಹೇರಲು ಮನವಿ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
IPL ಪ್ರಸಾರಕ್ಕೆ ನಿಷೇಧ
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಂಬರುವ ಐಪಿಎಲ್ ಪಂದ್ಯಗಳು ಬಾಂಗ್ಲಾದೇಶ್ನಲ್ಲಿ ಪ್ರಸಾರವಾಗದಿರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಪಾಕಿಸ್ತಾನ್ ಸರ್ಕಾರ ಐಪಿಎಲ್ ಪ್ರಸಾರಕ್ಕೆ ನಿಷೇಧ ಹೇರಿರುವುದು ಗಮನಾರ್ಹ. ಇದೀಗ ಬಾಂಗ್ಲಾದೇಶ್ ಕೂಡ ಪಾಕಿಸ್ತಾನ್ ಮಾದರಿಯಲ್ಲೇ ಐಪಿಎಲ್ ಲೈವ್ ಪ್ರಸಾರಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ.

ಪಂದ್ಯಗಳು ಸ್ಥಳಾಂತರ
ಇದಲ್ಲದೆ, ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ (ಬಿಸಿಬಿ) ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗೆ ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶ್ ತಂಡದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯ ವಹಿಸುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.
ಈ ಎಲ್ಲ ಬೆಳವಣಿಗೆಗಳು ಭಾರತ–ಬಾಂಗ್ಲಾದೇಶ್ ಕ್ರಿಕೆಟ್ ಸಂಬಂಧಗಳಲ್ಲಿ ಹೊಸ ತಿರುವು ಪಡೆದುಕೊಳ್ಳುತ್ತಿರುವುದನ್ನು ಸೂಚಿಸುತ್ತಿವೆ.

ಇದನ್ನು ನೋಡಿ : 18.50 ಕೋಟಿ ವೆಚ್ಚದ ಚೆಕ್ ಡ್ಯಾಂ ಉದ್ಘಾಟಿಸಿದ ಸಚಿವ ಬೋಸರಾಜು




